ದೇಶ

ಮೋದಿ ಜಾಕೆಟ್ ವಿದೇಶಗಳಲ್ಲೂ ಜನಪ್ರಿಯ

ಮೋದಿ ಧರಿಸುವ ಅರ್ಧತೋಳಿನ ಕೋಟು ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಜನಪ್ರಿಯವಾಗಿದೆ.

ಮೋದಿ ಜಾಕೆಟ್ ವಿದೇಶಗಳಲ್ಲೂ ಜನಪ್ರಿಯ
ನರೇಂದ್ರ ಮೋದಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಧರಿಸುವ ಅರ್ಧತೋಳಿನ ಕೋಟು ಭಾರತದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಜನಪ್ರಿಯವಾಗಿದೆ.
ಲೋಕಸಭೆಯಲ್ಲಿ ಮಾತನಾಡಿದ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಕಲ್ ರಾಜ್ ಮಿಶ್ರಾ ಮಾಜಿ ಪ್ರಧಾನಿ ನೆಹರು ಅವರು ಧರಿಸುತ್ತಿದ್ದ ಜಾಕೆಟ್ 'ಜವಾಹರ್ ಜಾಕೆಟ್' ಎಂದೇ ಪ್ರಸಿದ್ಧವಾದ ಕಾಲವೊಂದಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಧರಿಸುವ ಜಾಕೆಟ್ ಅತಿ ಹೆಚ್ಚು ಜನಪ್ರಿಯತೆ ಗಳಿಸಿದೆ ಎಂದು ಹೇಳಿದ್ದಾರೆ. 
ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಮೋದಿ ಜಾಕೆಟ್ ಖ್ಯಾತಿ ಪಡೆದಿದ್ದು ಇತ್ತೀಚಿಗೆ ಭಾರತಕ್ಕೆ ಭೇಟಿ ನೀಡಿದ್ದ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರೂ ಸಹ ಮೋದಿ ಮಾದರಿಯ ಜಾಕೆಟ್ ಧರಿಸಿದ್ದರು ಎಂದು ಮಿಶ್ರಾ ಮಾಹಿತಿ ನೀಡಿದ್ದಾರೆ.
ಖಾದಿ ಉಡುಪುಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ವಿಷಯ ಚರ್ಚೆಯಾಗುತ್ತಿದ್ದಾಗ ಮೋದಿ ಜಾಕೆಟ್ ವಿಷಯ ಪ್ರಸ್ತಾಪವಾಗಿದ್ದು, ಕೇಂದ್ರ ಸರ್ಕಾರ ಖಾದಿ ಉಡುಪುಗಳನ್ನು ಉತ್ತೇಜಿಸಲು ಸೂಕ್ತ ಕ್ರಮ ಕೈಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ. 
2014 -15 ನೇ ಸಾಲಿನಲ್ಲಿ 12,513.72 ಕೋಟಿ ರೂಪಾಯಿ ಮೌಲ್ಯದ ಖಾದಿ ಉತ್ಪನ್ನಗಳು ಮಾರಾಟವಾಗಿದೆ ಎಂದು ಮಿಶ್ರಾ ತಿಳಿಸಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.