ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಬಿಹಾರ ಮಾದರಿಯ ಮಹಾಮೈತ್ರಿಕೂಟ ರಚನೆಗೆ ನಿತೀಶ್ ಕರೆ
2016 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲೂ ಬಿಹಾರ ಮಾದರಿಯ ಮಹಾಮೈತ್ರಿಕೂಟ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ.

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮಹಾಮೈತ್ರಿಕೂಟ ರಚನೆಯ ಕಾರ್ಯತಂತ್ರ ಯಶಸ್ವಿಯಾಗಿರುವುದರಿಂದ 2016 ರಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲೂ ಇದೇ ಮಾದರಿಯ ಕಾರ್ಯತಂತ್ರ ರೂಪುಗೊಳ್ಳುವ ಸಾಧ್ಯತೆ ಇದೆ.
ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳಲು ಯತ್ನಿಸುತ್ತಿರುವ ನಿತೀಶ್ ಕುಮಾರ್, ಜೆಡಿಯು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಿದ್ದು, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಮುಂಬರುವ ವಿಧಾನಸಭೆಯಲ್ಲಿ ಬಿಜೆಪಿ ವಿರುದ್ಧ ಬಿಹಾರ ಮಾದರಿಯ ಮಹಾಮೈತ್ರಿಕೂಟ ರಚನೆ ಕಾರ್ಯತಂತ್ರ ರೂಪಿಸುವಂತೆ ಕರೆ ನೀಡಿದ್ದಾರೆ.
ಎನ್ ಡಿಎ ಸರ್ಕಾರದ ವಿರುದ್ಧ ಕಾರ್ಯತಂತ್ರ ರೂಪಿಸಲು ಜೆಡಿಯು ಈಗ ಸಮಾನಮನಸ್ಕರನ್ನು ಆಹ್ವಾನಿಸುತ್ತಿದ್ದು, ಬಿಹಾರ ಮಾದರಿಯ ಮಹಾಮೈತ್ರಿಕೂಟ ವನ್ನು ದೇಶಾದ್ಯಂತ ಪ್ರಯೋಗಿಸಲು ಸಜ್ಜಾಗುವ ಸೂಚನೆ ಇದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜೆಡಿಯು ಪಕ್ಷದ ಚಿಹ್ನೆಯನ್ನು ಬದಲಾಯಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲು ಸಹ ನಿರ್ಧರಿಸಲಾಗಿದೆ ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


