ರಾಮ ಮಂದಿರ ವಿವಾದ; ಮಂದಿರ ನಿರ್ಮಾಣದ ಹಿಂದೆ ರಾಜಕೀಯ ಉದ್ದೇಶ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಶಿ ರಾಶಿ ಕಲ್ಲುಗಳನ್ನು ಅಯೋಧ್ಯೆಗೆ ಕೊಂಡೊಯ್ಯಲಾಗುತ್ತದೆ ಎಂಬ ಸುದ್ದಿ ಬಗ್ಗೆ ಬಾಬರಿ...

Published On :
ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಶಿ ರಾಶಿ ಕಲ್ಲುಗಳನ್ನು ಅಯೋಧ್ಯೆಗೆ ಕೊಂಡೊಯ್ಯಲಾಗುತ್ತದೆ ಎಂಬ ಸುದ್ದಿ ಬಗ್ಗೆ ಬಾಬರಿ ಮಸೀದಿ ಆಕ್ಷನ್ ಕಮಿಟಿ ಸಂಚಾಲಕ ಜಫರ್‌ಯಾದ್ ಜಿಲಾನಿ ಪ್ರತಿಕ್ರಿಯಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ರಾಜಕೀಯ ಉದ್ದೇಶದಿಂದ ಕೂಡಿದೆಯೇ ಹೊರತು ಧಾರ್ಮಿಕ ಉದ್ದೇಶವನ್ನು ಹೊಂದಿಲ್ಲ.
ಸುಪ್ರೀಂ ಕೋರ್ಟ್‌ನಲ್ಲಿ ಈ ಪ್ರಕರಣ ಇನ್ನೂ ಇತ್ಯರ್ಥವಾಗದೇ ಇರುವಾಗ ರಾಜಸ್ತಾನಕ್ಕೆ ಇಲ್ಲಿಂದ ಕಲ್ಲುಗಳನ್ನು ತೆಗೆದುಕೊಂಡು ಹೋಗುವುದು ಅಲ್ಲಿನ ಶೇ. 10-15 ರಷ್ಟು ಮತಗಳನ್ನು ಆಕರ್ಷಿಸಲೇ ವಿನಾ ಬೇರ್ಯಾವ ಉದ್ದೇಶದಿಂದ ಅಲ್ಲ. ಈ ರೀತಿಯ ಕೆಲಸಗಳನ್ನು ಮಾಡುವ ಮೂಲಕ ಮಾಧ್ಯಮದವರ ಗಮನ ಸೆಳೆಯಲಾಗುತ್ತಿದೆ. ಇದೆಲ್ಲವೂ ರಾಜಕೀಯ ಉದ್ದೇಶದಿಂದಲೇ ಹೊರತು ಧಾರ್ಮಿಕ ಉದ್ದೇಶದಿಂದ ಆಗುತ್ತಿರುವ ಚಟುವಟಿಕೆಗಳಲ್ಲ ಎಂದು ಜಿಲಾನಿ ಸುದ್ದಿ ಮಾಧ್ಯಮವೊಂದರಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


