ರಾಮ ಮಂದಿರ ನಿರ್ಮಾಣಕ್ಕೆ ಅಯೋಧ್ಯೆಗೆ 2 ಲೋಡ್ ಕಲ್ಲು
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಲ್ಲುಗಳನ್ನು ಸಂಗ್ರಹಿಸುವ ಕೆಲಸಕ್ಕೆ ವಿಎಚ್‌ಪಿ ಕಾರ್ಯಕರ್ತರು ಮುಂದಾಗಿದ್ದು, ಅದರ ಪೂರ್ವಭಾವಿಯಾಗಿ ಎರಡು...

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕಲ್ಲುಗಳನ್ನು ಸಂಗ್ರಹಿಸುವ ಕೆಲಸಕ್ಕೆ ವಿಎಚ್‌ಪಿ ಕಾರ್ಯಕರ್ತರು ಮುಂದಾಗಿದ್ದು, ಅದರ ಪೂರ್ವಭಾವಿಯಾಗಿ ಎರಡು ಟ್ರಕ್ ಗಳಲ್ಲಿ ಕಲ್ಲುಗಳನ್ನು ತಂದಿರಿಸಿದ್ದಾರೆ.
6 ತಿಂಗಳ ಹಿಂದೆ ಕಲ್ಲು ಸಂಗ್ರಹ ಕಾರ್ಯಕ್ಕೆ ವಿಶ್ವ ಹಿಂದು ಪರಿಷತ್ ನಾಯಕ ದಿವಂಗತ ಅಶೋಕ್ ಸಿಂಘಾಲ್ಕರೆ ನೀಡಿದ್ದರು. ಅಯೋಧ್ಯೆಯಲ್ಲಿ ವಿಎಚ್‌ಪಿ ವಶದಲ್ಲಿರೋ ರಾಮ ಸೇವಕಪುರಂನಲ್ಲಿ 2 ಲಾರಿ ಲೋಡಿನಷ್ಟು ಕಲ್ಲನ್ನು ಇಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಇವುಗಳಿಗೆ ರಾಮಜನ್ಮ ಭೂಮಿ ನ್ಯಾಸದ ಅಧ್ಯಕ್ಷ ಮಹಾಂತ್ ನೃತ್ಯ ಗೋಪಾಲ್ ದಾಸ್ ಅವರು ಪೂಜೆ ನೆರವೇರಿಸಿದರು ಎಂದು ವಿಎಚ್‌ಪಿ ವಕ್ತಾರ ಶರದ್ ಶರ್ಮಾ ಹೇಳಿದ್ದಾರೆ.
‘ರಾಮಮಂದಿರ ನಿರ್ಮಿಸಲು ಮೋದಿ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ’ ಎಂದು ಮಹಾಂತ್ ಅವರು ಹೇಳಿದ್ದಾರೆ. ‘ರಾಮ ಮಂದಿರ ನಿರ್ಮಾಣಕ್ಕೆ ಈಗ ಅವಕಾಶ ಕೂಡಿ ಬಂದಿದೆ. ಇದಕ್ಕಾಗಿ ಸಾಕಷ್ಟು ಕಲ್ಲುಗಳನ್ನು ಅಯೋಧ್ಯೆಗೆ ತರಲಾಗಿದೆ. ಇದೇ ರೀತಿ ಇನ್ನಷ್ಟು ಕಲ್ಲುಗಳನ್ನು ತರಲಾಗುವುದು’ ಎಂದು ವಿವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


