ಬಾಲ ನ್ಯಾಯ ಕಾಯ್ದೆ: ರಾಹುಲ್ ಗಾಂಧಿ ಭೇಟಿ ಮಾಡಿದ ನಿರ್ಭಯಾ ಪೋಷಕರು
ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಪೋಷಕರು ಮಂಗಳವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ...

ಬೆಂಗಳೂರು: ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಪೋಷಕರು ಮಂಗಳವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ, ಬಾಲಪರಾಧ ನ್ಯಾಯ ತಿದ್ದುಪಡಿ ಕಾಯ್ದೆಗೆ ರಾಜ್ಯಸಭೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದರು.
ರಾಹುಲ್ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಭಯಾ ತಾಯಿ ಆಶಾದೇವಿ ಅವರು, ತಮ್ಮ ಪಕ್ಷ ರಾಜ್ಯಸಭೆಯಲ್ಲಿ ಬಾಲಪರಾಧ ನ್ಯಾಯ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಇದಕ್ಕೂ ಮುನ್ನ ನಿರ್ಭಯಾ ಪೋಷಕರು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ಭೇಟಿ ಮಾಡಿ, ಬಾಲಪರಾಧ ನ್ಯಾಯ ತಿದ್ದುಪಡಿ ಕಾಯ್ದೆ ಅಂಗೀಕರಿಸುವಂತೆ ಒತ್ತಾಯಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


