ಬಿಎಸ್ಎಫ್ ವಿಮಾನ ಪತನ: ಪ್ರಧಾನಿ ಮೋದಿ, ಸೋನಿಯಾ ವಿಷಾದ
ದೆಹಲಿಯ ದ್ವಾರಕಾ ದಲ್ಲಿ ಸಂಭವಿಸಿದ ಬಿಎಸ್ಎಫ್ ವಿಮಾನ ಪತನ ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ವಿಷಾದ ವ್ಯಕ್ತಪಡಿಸಿದ್ದಾರೆ...
ನವದೆಹಲಿ: ದೆಹಲಿಯ ದ್ವಾರಕಾ ದಲ್ಲಿ ಸಂಭವಿಸಿದ ಬಿಎಸ್ಎಫ್ ವಿಮಾನ ಪತನ ಘಟನೆಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ವಿಷಾದ ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ ಅವರು ವಿಷಾದ ವ್ಯಕ್ತಪಡಿಸಿದ್ದು, ಬಿಎಸ್ಎಫ್ ಯೋಧರ ಸಾವು ನೋವುಂಟು ಮಾಡಿದೆ. ಯೋಧರ ಕುಟುಂಬದ ಬಗ್ಗೆ ಚಿಂತೆಯುಂಟಾಗುತ್ತಿದೆ ಎಂದು ಹೇಳಿದ್ದಾರೆ.
ಘಟನೆ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಟ್ವಿಟರ್ ನಲ್ಲಿ ವಿಷಾದ ವ್ಯಕ್ತಪಡಿಸಿದ್ದು, ಘಟನೆ ಸಾಕಷ್ಟು ಆಶ್ಚರ್ಯವನ್ನುಂಟು ಮಾಡಿತು. ಯೋಧರ ಸಾವು ನೋವನ್ನುಂಟು ಮಾಡಿದೆ. ಘಟನೆಗೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ.
ಇಂದು ಬೆಳಿಗ್ಗೆ 9.50ರ ಸುಮಾರಿಗೆ ಸೂಪರ್ ಕಿಂಗ್ ಹೆಸರಿನ ಬಿಎಸ್ ಎಫ್ ವಿಮಾನ ದೆಹಲಿಯಿಂದ ರಾಂಚಿಗೆ ತೆರಳುತ್ತಿತ್ತು. ವಿಮಾನ ನಿಲ್ದಾಣದಿಂದ ಟೇಕಾಫ್ ಆದ 5 ನಿಮಿಷದಲ್ಲೇ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿತ್ತು. ಇದರ ಪರಿಣಾಮ ವಿಮಾನಕ್ಕೆ ಬೆಂಕಿ ಹತ್ತಿಕೊಂಡು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿತ್ತು. ಘಟನೆಯಲ್ಲಿ ವಿಮಾನದಲ್ಲಿದ್ದ 10 ಬಿಎಸ್ಎಫ್ ಯೋಧರು ಸಾವನ್ನಪ್ಪಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

