ದೇಶ

ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆಗೆ ಪಾಕಿಸ್ತಾನದ ಪ್ರಸ್ತಾವನೆ

ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್, ಭಾರತದೊಂದಿಗೆ ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆಗೆ ಪ್ರಸ್ತಾವನೆ ನೀಡಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆಗೆ ಪಾಕಿಸ್ತಾನದ ಪ್ರಸ್ತಾವನೆ
ಪಾಕ್ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್
Published On :

ಇಸ್ಲಾಮಾಬಾದ್: ಪಾಕ್ ಪ್ರಧಾನಿ ನವಾಜ್ ಷರೀಫ್ ಅವರ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್, ಭಾರತದೊಂದಿಗೆ ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆಗೆ ಪ್ರಸ್ತಾವನೆ ನೀಡಿದ್ದಾರೆ.
ಪಾಕಿಸ್ತಾನದ ಪ್ರಸ್ತಾವನೆಗೆ ಭಾರತದ ಪ್ರತಿಕ್ರಿಯೆಗೆ ಎದುರು ನೋಡುತ್ತಿದ್ದೇವೆ ಎಂದು ಸರ್ತಾಜ್ ಅಜೀಜ್ ಹೇಳಿರುವುದನ್ನು ಡಾನ್ ಅಂತರ್ಜಾಲ ಪತ್ರಿಕೆ ವರದಿ ಮಾಡಿದೆ. ವಿದೇಶಾಂಗ ಕಾರ್ಯದರ್ಶಿ ಮಟ್ಟದ ದ್ವಿಪಕ್ಷೀಯ ಮಾತುಕತೆ ಇಸ್ಲಾಮಾಬಾದ್ ನಲ್ಲಿ ನಡೆಯಲಿದ್ದು, ಇತ್ತೀಚೆಗಷ್ಟೇ ಪಾಕ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿ ನೀಡಿದ್ದ ವೇಳೆ ಉಭಯ ದೇಶಗಳ ನಡುವಿನ ಸೌಹಾರ್ದಯುತ ಸಂಬಂಧವನ್ನು ಮುಂದುವರೆಸಲು ನಿರ್ಧರಿಸಲಾಗಿತ್ತು. ವಿದೇಶಾಂಗ ಕಾರ್ಯದರ್ಶಿಗಳ ಮಾತುಕತೆ ನಡೆದರೆ ಕಾಶ್ಮೀರ, ಸಿಯಾಚಿನ್, ಟುಲ್ಬುಲ್ ನ್ಯಾವಿಗೇಶನ್ ಪ್ರಾಜೆಕ್ಟ್, ಆರ್ಥಿಕ, ವಾಣಿಜ್ಯ ಸಹಕಾರ ಚರ್ಚೆಗೆ ಬರಲಿರುವ  ಪ್ರಮುಖ ವಿಷಯಗಳಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.