ದೇಶ

ರಾಜಕೀಯ ಒತ್ತಡದಿಂದ ಮೋದಿ ಜೇಟ್ಲಿ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್

ರಾಜಕೀಯ ಒತ್ತಡದಿಂದ ಪ್ರಧಾನಿ ನರೇಂದ್ರ ಮೋದಿ, ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಜಕೀಯ ಒತ್ತಡದಿಂದ ಮೋದಿ ಜೇಟ್ಲಿ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ:  ಕಾಂಗ್ರೆಸ್
ಅರುಣ್ ಜೇಟ್ಲಿ
Published On :

ನವದೆಹಲಿ: ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಒತ್ತಡದಿಂದ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಡಿಡಿಸಿಎ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಕಾಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು, ಆದರೆ ವಸುಂದರಾ ರಾಜೆ, ಸುಷ್ಮಾ ಸ್ವರಾಜ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ವಿರುದ್ಧ ಆರೋಪ ಕೇಳಿಬಂದಾಗ ಪ್ರಧಾನಿ ಮೋದಿ ಈ ರೀತಿಯ ಹೇಳಿಕೆ ನೀಡಿರಲಿಲ್ಲ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.
ರಾಜಕೀಯ ಒತ್ತಡದಿಂದ ಅರುಣ್ ಜೇಟ್ಲಿ ಅವರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂಬುದು ಪ್ರಧಾನಿ ಮೋದಿ ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ. ವಿತ್ತ ಸಚಿವರಾಗಿರುವ ಅರುಣ್ ಜೇಟ್ಲಿ ಅವರು ನೈತಿಕ ಕರ್ತವ್ಯವನ್ನು ಹೊಂದಿದ್ದಾರೆ  ಅದನ್ನು ಪಾಲಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದು ಅವರಿಗೆ ಬಿಟ್ಟ ವಿಚಾರ ಎಂದು ಸಂದೀಪ್ ದೀಕ್ಷಿತ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.