ದೇಶ

ಮೃತ ಬಿಎಸ್ಎಫ್ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ಧಾಂಜಲಿ

ದೆಹಲಿ ವಿಮಾನ ನಿಲ್ದಾಣದ ಸಮೀಪ ಸೂಪರ್ ಕಿಂಗ್ ಹೆಸರಿನ ವಿಮಾನ ಪತನದಲ್ಲಿ ಮೃತಪಟ್ಟ 10 ಮಂದಿ ಗಡಿ ಭದ್ರತಾ ಪಡೆ(ಬಿಎಸ್ಎಫ್) ಯೋಧರಿಗೆ ರಾಜನಾಥ್...

ಮೃತ ಬಿಎಸ್ಎಫ್ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ಧಾಂಜಲಿ
ರಾಜನಾಥ್ ಸಿಂಗ್
Published On :
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಸಮೀಪ ಸೂಪರ್ ಕಿಂಗ್ ಹೆಸರಿನ ವಿಮಾನ ಪತನದಲ್ಲಿ ಮೃತಪಟ್ಟ 10 ಮಂದಿ ಗಡಿ ಭದ್ರತಾ ಪಡೆ(ಬಿಎಸ್ಎಫ್) ಯೋಧರಿಗೆ ರಾಜನಾಥ್ ಸಿಂಗ್ ಬುಧವಾರ ಗೌರವ ನಮನ ಸಲ್ಲಿಸಿದರು.
ರಾಜನಾಥ್ ಸಿಂಗ್ ಅವರು ಸಫ್ದರ್​ಜಂಗ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಿಎಸ್ಎಫ್ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಗೃಹ ಸಚಿವರ ಜೊತೆಗೆ ಆಗಮಿಸಿದ ಗೃಹ ರಾಜ್ಯ ಸಚಿವೆ ಕಿರಣ್ ರಿಜಿಜು, ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರೂ ಮೃತರಿಗೆ ಶ್ರದ್ಧಾಂಜಲಿ ಅರ್ಪಿಸಿ, ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಜಧಾನಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಆದ ಪ್ರಾಣಹಾನಿಗಾಗಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.