ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 91 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಷಯ ಕೋರಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 91 ನೇ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದು, ಅಟಲ್ ಬಿಹಾರಿ ವಾಜಪೇಯಿ ಅವರು ಭಾರತಕ್ಕೆ ಅಸಾಧಾರಣ ನಾಯಕತ್ವ ನೀಡಿದ್ದರು ಎಂದು ಹೇಳಿದ್ದಾರೆ.
ನಿರ್ಣಾಯಕ ಸಮಯದಲ್ಲಿ ಭಾರತಕ್ಕೆ ಸಮರ್ಥ ನಾಯಕತ್ವ ನೀಡಿದ್ದ ಹೆಗ್ಗಳಿಕೆ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಲ್ಲುತ್ತದೆ. ಪಕ್ಷದ ನಾಯಕನಾಗಿ, ಸಂಸದೀಯ ನಾಯಕನಾಗಿ, ಮಂತ್ರಿ, ಪ್ರಧಾನಮಂತ್ರಿ ಸೇರಿದಂತೆ ಪ್ರತಿಯೊಂದು ಹಂತದಲ್ಲೂ ಅಟಲ್ ಜಿ ತಮ್ಮ ಮಾಹತ್ವವನ್ನು ಸಾಬೀತುಪಡಿಸಿದ್ದರು, ಅದು ಅವರ ವಿಶೇಷತೆಯಾಗಿತ್ತು. ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಭಾರತಕ್ಕೆ ಆಗಮಿಸಿದ ಕೂಡಲೇ ಅಟಲ್ ಬಿಹಾರಿ ವಾಜಪೇಯಿ ಅವರ ನಿವಾಸಕ್ಕೆ ತೆರಳಿ ಜನ್ಮದಿನದ ಶುಭಾಶಯ ತಿಳಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


