ದೆಹಲಿ ಸರ್ಕಾರದಿಂದ ಮೂವರು ಭ್ರಷ್ಟ ಅಧಿಕಾರಿಗಳ ಅಮಾನತು
ಆಟೋ ರಿಕ್ಷಾ ಪರವಾನಿಗೆ ಹಗರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಮೂವರು ಅಧಿಕಾರಿಗಳನ್ನು ದೆಹಲಿ ಸರ್ಕಾರ ಶನಿವಾರ ಅಮಾನತು...

Published On :
ನವದೆಹಲಿ: ಆಟೋ ರಿಕ್ಷಾ ಪರವಾನಿಗೆ ಹಗರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಮೂವರು ಅಧಿಕಾರಿಗಳನ್ನು ದೆಹಲಿ ಸರ್ಕಾರ ಶನಿವಾರ ಅಮಾನತು ಮಾಡಿದೆ.
ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಆಟೋ ರಿಕ್ಷಾಗಳ ಪರವಾನಗಿ ನವೀಕರಣಕ್ಕಾಗಿ ಲಂಚ ಪಡೆದ ಆರೋಪದ ಎದುರಿಸುತ್ತಿದ್ದ ಉಪ ಆಯುಕ್ತ(ಆಟೋ ರಿಕ್ಷಾ ಘಟಕ) ರಾಯ್ ಬಿಸ್ವಾಸ್, ಇನ್ಸ್‌ಪೆಕ್ಟರ್ ಮನಿಶ್ ಪುರಿ ಹಾಗೂ ಗುಮಾಸ್ತ ಅನಿಲ್ ಯಾದವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು.
ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಸಾರಿಗೆ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಟ್ವಿಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


