ರಾಷ್ಟ್ರೀಯ ಯುವದಿನೋತ್ಸವ ಆಚರಣೆಗೆ ಸಲಹೆ ನೀಡಲು ಯುವಜನತೆಗೆ ಪ್ರಧಾನಿ ಮೋದಿ ಆಹ್ವಾನ
ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಜ.12 ರಂದು ಆಚರಿಸಲಾಗುವ ರಾಷ್ಟ್ರೀಯ ಯುವದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಯುವಕರಿಂದಲೇ ಸಲಹೆ ಕೇಳಿದ್ದಾರೆ.

ನವದೆಹಲಿ: ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಜ.12 ರಂದು ಆಚರಿಸಲಾಗುವ ರಾಷ್ಟ್ರೀಯ ಯುವದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಯುವಕರಿಂದಲೇ ಸಲಹೆ ಕೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ "ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜ.12 ನ್ನು ಯುವದಿನವನ್ನಾಗಿ ಆಚರಿಸುತ್ತೇವೆ, 1995 ರಿಂದ ರಾಷ್ಟ್ರೀಯ ಯುವದಿನೋತ್ಸವವನ್ನು ಆಚರಿಸಲಾಗುತ್ತಿದ್ದು ಈ ಬಾರಿಯ ಯುವದಿನೋತ್ಸವ ರಾಯ್ ಪುರ, ಚತ್ತೀಸ್ ಗಢದಲ್ಲಿ ನಡೆಯಲಿದ್ದು ಆಚರಣೆ ನಡೆಸುವುದರ ಬಗ್ಗೆ ಯುವಜನರು ಮುಕ್ತವಾಗಿ ಸಲಹೆ ನೀಡಬಹುದು ಎಂದು ಪ್ರಧಾನಿ ಕರೆ ನೀಡಿದ್ದಾರೆ.
ಭಾರತದ ಯುಜನತೆ ಹಾಗೂ ಅಭಿವೃದ್ಧಿ, ಕೌಶಲ್ಯ ಮತ್ತು ಸಾಮರಸ್ಯ ಈ ಬಾರಿಯ ಯುವದಿನೋತ್ಸವದ ವಿಷಯವಾಗಿರಲಿದ್ದು ಇದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡಲು ಸಲಹೆ ಕೊಡುವಿರಾ ಎಂದು ಪ್ರಧಾನಿ ನರೇಂದ್ರ ಮೋದಿ ಯುವಕತೆಗೆ ಕರೆ ನೀಡಿದ್ದಾರೆ. ನರೇಂದ್ರ ಮೋದಿ ಮೊಬೈಲ್ ಆಪ್ ಮೂಲಕ ಯುವಜನತೆ ತಮ್ಮ ಸಲಹೆಗಳನ್ನು ನೀಡಬಹುದು ಎಂದು ಮೋದಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


