ಕಾಂಗ್ರೆಸ್ ನಿಂದ 131ನೇ ಸಂಸ್ಥಾಪನಾ ದಿನಾಚರಣೆ
ಕಾಂಗ್ರೆಸ್ ತನ್ನ 131ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಧ್ವಜಾರೋಹಣ ಮಾಡಿದ್ದಾರೆ...

ನವದೆಹಲಿ: ಕಾಂಗ್ರೆಸ್ ತನ್ನ 131ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ಧ್ವಜಾರೋಹಣ ಮಾಡಿದ್ದಾರೆ.
ಪಕ್ಷ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಗೆ ಹಾಜರಾದ ರಾಹುಲ್ ಗಾಂಧಿ, ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಹಿರಿಯ ನಾಯಕ ಸಲ್ಮಾನ್ ಖುರ್ಷಿದ್, ಆನಂದ್ ಶರ್ಮಾ, ಶೀಲಾ ದೀಕ್ಷಿತ್, ಗುಲಾಂ ನಬಿ ಮತ್ತು ಮನೀಶ್ ತಿವಾರಿ ಸೇರಿದಂತೆ ಇನ್ನಿತರೆ ನಾಯಕರು ಧ್ವಜಾರೋಹಣ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಸಮಾರಂಭದಲ್ಲಿ ಪಕ್ಷದ ಹಲವು ಕಾರ್ಯಕರ್ತರು ಹಾಜರಿದ್ದರು. ಧ್ವಜಾರೋಹಣ ಮಾಡಿದ ಸೋನಿಯಾ ಗಾಂಧಿಯವರು ಪಕ್ಷದ ನಾಯಕರೊಂದಿಗೆ ಮಾತುಕತೆಯಲ್ಲಿ ತೊಡಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


