ದೇಶ

ಪ.ಬಂಗಾಳದಲ್ಲಿ ಸಿಪಿಎಂ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಲಿ: ಸೋಮನಾಥ ಚಟರ್ಜಿ

ಪಶ್ಚಿಮ ಬಂಗಾಳದಲ್ಲಿ ಸಿಪಿಎಂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಬೇಕಾಗಿದೆ ಎಂದು ಸಿಪಿಎಂನ ಮಾಜಿ ನೇತಾರ ಸೋಮನಾಥ ಚಟರ್ಜಿ ಹೇಳಿದ್ದಾರೆ...

ಪ.ಬಂಗಾಳದಲ್ಲಿ ಸಿಪಿಎಂ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಲಿ: ಸೋಮನಾಥ ಚಟರ್ಜಿ
ಸೋಮನಾಥ ಚಟರ್ಜಿ
Published On :
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಿಪಿಎಂ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಬೇಕಾಗಿದೆ ಎಂದು ಸಿಪಿಎಂನ ಮಾಜಿ ನೇತಾರ ಸೋಮನಾಥ ಚಟರ್ಜಿ ಹೇಳಿದ್ದಾರೆ. ಬಂಗಾಳದಲ್ಲಿ ಸಿಪಿಎಂಗೆ ಒಬ್ಬಂಟಿಯಾಗಿ ನೆಲೆ ನಿಲ್ಲುವ ಪರಿಸ್ಥಿತಿ ಇಲ್ಲ. ಹಾಗಾಗಿ ಒಬ್ಬಂಟಿಯಾಗಿ ಸ್ಪರ್ಧಿಸಿದರೆ ಸಿಪಿಎಂ ಎರಡನೇ ಅಥವಾ ಮೂರನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿ ಬರುತ್ತದೆ. ಸಿಪಿಎಂ ಹೀಗೆ ಕುಸಿಯುತ್ತಿರುವುದನ್ನು ನೋಡಲು ನನಗೆ ಇಷ್ಟವಿಲ್ಲ. ಆದ್ದರಿಂದಲೇ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ವಿರುದ್ಧವಿರುವ ಕಾಂಗ್ರೆಸ್ ಸೇರಿದಂತೆ ಇನ್ನಿತರ ಪಕ್ಷಗಳೊಂದಿಗೆ ಸಿಪಿಎಂ ಮೈತ್ರಿ ಮಾಡಿಕೊಳ್ಳುವುದೊಳಿತು ಎಂದು ಚಟರ್ಜಿ ಹೇಳಿದ್ದಾರೆ.
ಅದೇ ವೇಳೆ ಸಿಪಿಎಂನ ಹಳೆಯ ನೇತೃತ್ವದ ಬಗ್ಗೆಯೂ ಚಟರ್ಜಿ ವಿಮರ್ಶಿಸಿದ್ದಾರೆ. ಬಂಗಾಳದಲ್ಲಿ ಸಿಪಿಎಂಗೆ ಹೊಡೆತವುಂಟಾಗುತ್ತದೆ ಎಂದು ಮುನ್ನೆಚ್ಚರಿಕೆ ನೀಡಿದ್ದರೂ, ಅದನ್ನು ಗಮನಿಸದೇ ಇದ್ದದ್ದು ಯಾಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಇದೀಗ ಸಿಪಿಎಂನ ಹೊಸ ನೇತೃತ್ವ ಹಾಗೂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಬಗ್ಗೆ ಭರವಸೆ ಇದೆ. ಅವರಿಂದ ಬದಲಾವಣೆ ಸಾಧ್ಯ ಎಂಬ ವಿಶ್ವಾಸ ನನಗಿದೆ. ಆದರೆ ಅವರಿಗೆ ಪಾಲಿಟ್ ಬ್ಯೂರೋದಲ್ಲಿ ಬಹುಮತವಿದೆಯೇ ಎಂಬ ಸಂದೇಹವಿದೆ ಎಂದು ಚಟರ್ಜಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.