ದಾದ್ರಿಯ ಅಖ್ಲಾಕ್ ಮನೆಯಲ್ಲಿದ್ದದ್ದು ಗೋಮಾಂಸ ಅಲ್ಲ: ಸರ್ಕಾರದ ವರದಿ
ದಾದ್ರಿಯ ಅಖ್ಲಾಕ್ ಮನೆಯ ಫ್ರಿಡ್ಜ್‌ನಲ್ಲಿದ್ದದ್ದು ಮಟನ್ ಹೊರತು ಗೋಮಾಂಸ ಅಲ್ಲ ಎಂದು ಉತ್ತರ ಪ್ರದೇಶ ಸರ್ಕಾರದ ಚೀಫ್ ವೆಟರ್ನಿಟಿ ಆಫೀಸರ್ ನೀಡಿದ...

Published On :
ಲಕ್ನೋ: ದಾದ್ರಿಯ ಅಖ್ಲಾಕ್ ಮನೆಯ ಫ್ರಿಡ್ಜ್‌ನಲ್ಲಿದ್ದದ್ದು ಮಟನ್ ಹೊರತು ಗೋಮಾಂಸ ಅಲ್ಲ ಎಂದು ಉತ್ತರ ಪ್ರದೇಶ ಸರ್ಕಾರದ ಚೀಫ್ ವೆಟರ್ನಿಟಿ ಆಫೀಸರ್ ನೀಡಿದ ವರದಿಯಲ್ಲಿ ಹೇಳಲಾಗಿದೆ.
ಸೆಪ್ಟೆಂಬರ್ 28 ರಂದು ಮನೆಯಲ್ಲಿ ಗೋಮಾಂಸ ಸಂಗ್ರಹಿಸಿದ್ದಾರೆ ಎಂಬ ಆರೋಪದ ಮೇರೆಗೆ 15 ಮಂದಿಯ ಗುಂಪೊಂದು ಮಹಮ್ಮದ್ ಅಕ್ಲಾಖ್‌ನ್ನು ಥಳಿಸಿ ಹತ್ಯೆಗೈದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಮಂದಿಯ ವಿರುದ್ಧವೂ ಆರೋಪ ಪಟ್ಟಿ ದಾಖಲಿಸಲಾಗಿತ್ತು.
ಆದಾಗ್ಯೂ, ಅಖ್ಲಾಕ್ ಪ್ರಕರಣದಲ್ಲಿ ಸರ್ಕಾರ ಇಲ್ಲಿಯವರೆಗೆ ತೆಗೆದುಕೊಂಡ ಕ್ರಮಗಳೇ ಸಾಕು. ಇನ್ಮುಂದೆ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿಲ್ಲ ಎಂದು ಅಖ್ಲಾಕ್ ಕುಟುಂಬ ಹೇಳಿತ್ತು. ಅಖ್ಲಾಕ್ ಹತ್ಯೆಯ ನಂತರ ಸರ್ಕಾರ ಆತನ ಕುಟುಂಬಕ್ಕೆ ರು.45 ಲಕ್ಷ ಪರಿಹಾರ ಧನ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


