ದೇಶ

ವಿದೇಶಕ್ಕೆ ಹೋಗುತ್ತಿದ್ದೇನೆ, ಹೊಸ ವರ್ಷದ ಶುಭಾಶಯಗಳು: ರಾಹುಲ್‌ ಗಾಂಧಿ

ಹೊಸ ವರ್ಷಾಚರಣೆಗೆ ವಿದೇಶಕ್ಕೆ ತೆರಳುತ್ತಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು, ವಿದೇಶ ಪ್ರವಾಸ ಕೈಗೊಳ್ಳುವ ಮುನ್ನ ಟ್ವಿಟರ್ ಮೂಲಕ ದೇಶದ..

ವಿದೇಶಕ್ಕೆ ಹೋಗುತ್ತಿದ್ದೇನೆ, ಹೊಸ ವರ್ಷದ ಶುಭಾಶಯಗಳು: ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ
Published On :
ನವದೆಹಲಿ: ಹೊಸ ವರ್ಷಾಚರಣೆಗೆ ವಿದೇಶಕ್ಕೆ ತೆರಳುತ್ತಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು, ವಿದೇಶ ಪ್ರವಾಸ ಕೈಗೊಳ್ಳುವ ಮುನ್ನ ಟ್ವಿಟರ್ ಮೂಲಕ ದೇಶದ ಜನತೆಗೆ ಹೊಸ ವರ್ಷದ ಶುಭಾಶ ಕೋರಿದ್ದಾರೆ.
ಕಾಂಗ್ರೆಸ್‌ ಪಕ್ಷದ 130ನೇ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ರಾಹುಲ್‌ ಗಾಂಧಿ, 'ನಾನು ಕೆಲವು ದಿನಗಳ ಮಟ್ಟಿಗೆ ಯೂರೋಪ್ ಪ್ರವಾಸ ಹೋಗುತ್ತಿದ್ದೇನೆ; ಎಲ್ಲರಿಗೂ ಹೊಸ ವರ್ಷದ ಶುಭಾಶಯ'; ಎಂದು ಟ್ವೀಟ್ ಮಾಡಿದ್ದಾರೆ.
ರಾಹುಲ್‌ ಗಾಂಧಿ ಅವರ ಈಚಿನ ವಿದೇಶ ಪ್ರವಾಸಗಳು ಭಾರೀ ವಿವಾದಕ್ಕೆ ಕಾರಣವಾಗಿದ್ದವು. ಯಾರಿಗೂ ಹೇಳದೆ ಕೇಳದೆ ಇದ್ದಕ್ಕಿದ್ದಂತೆಯೇ ವಿದೇಶಕ್ಕೆ ಹಾರಿ ಬಿಡುವ ರಾಹುಲ್‌ ಅವರ ವಿದೇಶ ಪ್ರವಾಸಗಳು ಹಲವು ಊಹಾಪೋಹಗಳಿಗೆ ಕಾರಣವಾಗಿದ್ದವು.
ಬಿಹಾರ ಚುನಾವಣೆಗೆ ಮುನ್ನವೇ ರಾಹುಲ್‌ ಸೆಪ್ಟಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಂಡದ್ದು ಬಿಜೆಪಿಯ ಟೀಕೆಗೆ ಗುರಿಯಾಗಿತ್ತು. ಈ ವರ್ಷದ ಆರಂಭದಲ್ಲಿ ಸಂಸತ್ತು ನಡೆಯುತ್ತಿದ್ದಾಗಲೇ ಸುಮಾರು ಒಂದು ತಿಂಗಳ ಕಾಲ ರಾಹುಲ್‌ ರಜೆಯಲ್ಲಿ ಹೋಗಿ ಯಾರ ಕಣ್ಣಿಗೂ ಬೀಳದಂತೆ ಮಾಯವಾದದ್ದು ವ್ಯಾಪಕ ಟೀಕೆಗೆ ಕಾರಣವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.