ದೇಶ

ಡಿಡಿಸಿಎ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಅಗತ್ಯ: ಗೋಪಾಲ್ ಸುಬ್ರಮಣಿಯಂ

ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್‌ ಸಂಸ್ಥೆ (ಡಿಡಿಸಿಎ)ಯ ಹಗರಣವನ್ನು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆಯ ಅಗತ್ಯವಿದೆ ಎಂದು ಮಾಜಿ ಸಾಲಿಸಿಟರ್‌ ಜನರಲ್‌ ಗೋಪಾಲ್‌ ಸುಬ್ರಮಣಿಯಂ ಅವರು ಮಂಗಳವಾರ ಹೇಳಿದ್ದಾರೆ...

ಡಿಡಿಸಿಎ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಅಗತ್ಯ: ಗೋಪಾಲ್ ಸುಬ್ರಮಣಿಯಂ
ಮಾಜಿ ಸಾಲಿಸಿಟರ್‌ ಜನರಲ್‌ ಗೋಪಾಲ್‌ ಸುಬ್ರಮಣಿಯಂ (ಸಂಗ್ರಹ ಚಿತ್ರ)
Published On :

ನವದೆಹಲಿ: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್‌ ಸಂಸ್ಥೆ (ಡಿಡಿಸಿಎ)ಯ ಹಗರಣವನ್ನು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆಯ ಅಗತ್ಯವಿದೆ ಎಂದು ಮಾಜಿ ಸಾಲಿಸಿಟರ್‌ ಜನರಲ್‌ ಗೋಪಾಲ್‌ ಸುಬ್ರಮಣಿಯಂ ಅವರು ಮಂಗಳವಾರ ಹೇಳಿದ್ದಾರೆ.

ಈ ಹಿಂದಷ್ಟೇ ಗೋಪಾಲ್ ಸುಬ್ರಮಣಿಯಂ ಅವರು ಪ್ರಕರಣ ಸಂಬಂಧ ಆಯೋಗದ ನೇತೃತ್ವ ವಹಿಸಲು ಒಪ್ಪಿಗೆ ಸೂಚಿಸಿದ್ದರು. ಇದೀಗ ಪ್ರಕರಣ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡದ ಅಗತ್ಯವಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್ ಅವರಿಗೆ ಪತ್ರ ಬರೆದಿದ್ದು, ಪತ್ರದಲ್ಲಿ ವಿಶೇಷ ತನಿಖಾ ತಂಡದ ರಚನೆ ಅಗತ್ಯತೆ ಕುರಿತಂತೆ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತಂತೆ ಮಾತನಾಡಿರುವ ಅವರು, ಪ್ರಕರಣದ ತನಿಖೆ ನಡೆಸಲು ತಂಡ ರಚನೆಯ ಅಗತ್ಯವಿದ್ದು, ಈ ತಂಡಕ್ಕೆ 4-5 ಅಧಿಕಾರಿಗಳನ್ನು ನೇಮಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಸಿಬಿಐ, ಐಬಿ ಮತ್ತು ದೆಹಲಿ ಪೊಲೀಸ್ ಆಯೋಗದಲ್ಲಿ ಅಧಿಕಾರಿಗಳನ್ನು ನೇಮಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಅಗತ್ಯವಿದ್ದರೆ ಅಷ್ಟೇ ವಿಶೇಷ ತನಿಖಾ ತಂಡ ರಚನೆ ಮಾಡಲಾಗುತ್ತದೆ ಎಂದು ಸುಬ್ರಮಣಿಯಂ ಅವರು ಈ ಹಿಂದೆ ಹೇಳಿದ್ದರು. ಅಲ್ಲದೆ, ಪ್ರಕರಣ ಸಂಬಂಧ ಉತ್ತಮ ರೀತಿಯಲ್ಲಿ ತನಿಖೆ ನಡೆಸುವುದಾಗಿ ಅರವಿಂದ ಕೇಜ್ರಿವಾಲ್ ಅವರಿಗೆ ಭರವಸೆ ನೀಡಿದ್ದರು. ಪ್ರಕರಣದ ಸಂಬಂಧ ಸತ್ಯಾಸತ್ಯತೆಗಳನ್ನು ಶೀಘ್ರದಲ್ಲೇ ಹೊರಹಾಕಲಾಗುವುದು. ಸತ್ಯವನ್ನು ಹೊರಹಾಕಲು ನನ್ನಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.