ದೇಶ

ಕೇರಳದ ಶಿವಗಿರಿ ಮಠಕ್ಕೆ ಸೋನಿಯಾ ಗಾಂಧಿ ಭೇಟಿ, ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ

ವರ್ಕಾಲದಲ್ಲಿರುವ ಶಿವಗಿರಿ ಮಠಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಕೇರಳದ ಶಿವಗಿರಿ ಮಠಕ್ಕೆ ಸೋನಿಯಾ ಗಾಂಧಿ ಭೇಟಿ, ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ
ಸೋನಿಯಾ ಗಾಂಧಿ(ಸಂಗ್ರಹ ಚಿತ್ರ)
Published On :

ವರ್ಕಾಲ: ವರ್ಕಾಲದಲ್ಲಿರುವ ಶಿವಗಿರಿ ಮಠಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಸಮಾಜ ಸುಧಾರಕ ನಾರಾಯಣ ಗುರುಗಳ ಪರಂಪರೆಯ ಮೇಲೆ ಕೋಮುವಾದಿಗಳಿಂದ ಹಕ್ಕು ಪ್ರತಿಪಾದನೆ ಮಾಡುವ ಯತ್ನ ನಡೆದಿದೆ, ನಾರಾಯಣ ಗುರುಗಳ ಬೋಧನೆಗಳನ್ನು ಕೋಮುವಾದವನ್ನು ಬಿತ್ತುವ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ವರ್ಕಾಳದಲ್ಲಿರುವ ಶಿವಗಿರಿ ಮಠದಲ್ಲಿ 83 ನೇ ವಾರ್ಷಿಕ ತೀರ್ಥಯಾತ್ರೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಅಧಿಕಾರಕ್ಕಾಗಿ ಕೋಮು ಸಿದ್ಧಾಂತಗಳನ್ನು ಹೇರುತ್ತಿರುವವರು   ನಾರಾಯಣ ಗುರುಗಳಂತಹ ಪರಂಪರೆಯ ಮೇಲೆ ಹಕ್ಕು ಪ್ರತಿಪಾದನೆ ಮಾಡಲು ಯತ್ನಿಸುತ್ತಿದ್ದಾರೆ, ಅದಕ್ಕಿಂತ ಧ್ರೋಹ ಮತ್ತೊಂದಿಲ್ಲ ಎಂದು ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಈಳವ ಸಮುದಾಯದವರು ಹೆಚ್ಚಿರುವ ಶ್ರೀ ನಾರಾಯಣ ಧರ್ಮ ಪರಿಪಾಲನ ಸಂಗಮ್ ಬಿಜೆಪಿಯೊಂದಿಗೆ ಮೈತ್ರಿಮಾಡಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಶಿವಗಿರಿ ಮಠಕ್ಕೆ ಈಳವ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸುವವರಾಗಿದ್ದು ಸೋನಿಯಾ ಗಾಂಧಿ ಈಳವ ಸಮುದಾಯದವರ ಪ್ರಮುಖ ಸಂಘಟನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.