ಕರೆನ್ಸಿ ನೋಟುಗಳಲ್ಲಿ ಅಂಬೇಡ್ಕರ್ ಮತ್ತು ವಿವೇಕಾನಂದರ ಚಿತ್ರವೂ ಇರಲಿ
ರಾಷ್ಟ್ರೀಯ ಸಲಹಾ ಮಂಡಳಿಯ ಮಾಜಿ ಸದಸ್ಯರೊಬ್ಬರು ಕರೆನ್ಸಿ ನೋಟುಗಳಲ್ಲಿ ಬಿಆರ್ ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ...

Published On :
ನವದೆಹಲಿ: ರಾಷ್ಟ್ರೀಯ ಸಲಹಾ ಮಂಡಳಿಯ ಮಾಜಿ ಸದಸ್ಯರೊಬ್ಬರು ಕರೆನ್ಸಿ ನೋಟುಗಳಲ್ಲಿ ಬಿಆರ್ ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ಫೋಟೋಗಳನ್ನು ಚಿತ್ರಿಸಬೇಕೆಂದು ಒತ್ತಾಯಿಸಿದ್ದಾರೆ.
1996ರ ನಂತರ ಎಲ್ಲ ನೋಟುಗಳಲ್ಲಿ ಗಾಂಧೀಜಿಯ ಫೋಟೋಗಳು ಅಚ್ಚಾಗಿವೆ. ಆದರೆ ಅಂಬೇಡ್ಕರ್ ಮತ್ತು ವಿವೇಕಾನಂದರ ಫೋಟೋ ಯಾಕಿಲ್ಲ ಎಂದು ಎನ್‌ಎಸಿ ಮಾಜಿ ಸದಸ್ಯ ನರೇಂದ್ರ ಜಾದವ್ ಪ್ರಶ್ನಿಸಿದ್ದಾರೆ.
ಈ ಬಗ್ಗೆ ನಾನು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲಹೆ ನೀಡಿದ್ದೇನೆ. ಅಮೆರಿಕ ಮತ್ತು ಬ್ರಿಟನ್ ನಲ್ಲಿ ಹಲವಾರು ಪ್ರಸಿದ್ಧ ವ್ಯಕ್ತಿಗಳ ಚಿತ್ರಗಳನ್ನು ಕರೆನ್ಸಿ ನೋಟುಗಳಲ್ಲಿ ಅಚ್ಚು ಹಾಕಲಾಗಿದೆ. ಹೀಗಿರುವಾಗ ಬಿ ಆರ್ ಅಂಬೇಡ್ಕರ್ ಮತ್ತು ಸ್ವಾಮಿ ವಿವೇಕಾನಂದರ ಚಿತ್ರಗಳನ್ನು ಹಾಕುವುದು ಒಳ್ಳೆಯದು ಎಂದು ನರೇಂದ್ರ ಜಾದವ್ ಮೋದಿಯವರಿಗೆ ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


