ಅಮೃತಸರದಲ್ಲಿ ರಸ್ತೆ ಅಪಘಾತ: 9 ಸಾವು, 15 ಮಂದಿಗೆ ಗಾಯ
ಖಾಸಗಿ ಬಸ್ಸೊಂದು ಜಟಕಾ ಬಂಡಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿ 15 ಮಂದಿ ಗಾಯಗೊಂಡಿರುವ...

ಅಮೃತಸರ: ಖಾಸಗಿ ಬಸ್ಸೊಂದು ಜಟಕಾ ಬಂಡಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿ 15 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಅಮೃತಸರದಲ್ಲಿ ನಡೆದಿದೆ.
ಅಮೃತಸರದಿಂದ 15 ಕಿಲೋ ಮೀಟರ್ ದೂರದಲ್ಲಿ ಮೆಹ್ತಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಜಟಕಾ ಬಂಡಿಗೆ ಹಿಂದಿನಿಂದ ಖಾಸಗಿ ಬಸ್ಸು ಗುದ್ದಿದೆ ಎಂದು ಅಮೃತಸರ ಗ್ರಾಮಾಂತರ ಪ್ರದೇಶದ ವಿಶೇಷ ಪೊಲೀಸ್ ಮಹಾ ನಿರ್ದೇಶಕ ಜಸ್ದೀಪ್ ಸಿಂಗ್ ಸೈನಿ ತಿಳಿಸಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


