ಅಶೋಕ್ ಖೇಮ್ಕಾಗೆ ಹೊಸ ವರ್ಷಕ್ಕೆ ಬಡ್ತಿಯ ಕೊಡುಗೆ
ಹರ್ಯಾಣ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾಗೆ ಹೊಸ ವರ್ಷದ ಕೊಡುಗೆಯಾಗಿ ಬಡ್ತಿ...

ಚಂಡೀಗಢ್: ಹರ್ಯಾಣ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಅಶೋಕ್ ಖೇಮ್ಕಾಗೆ ಹೊಸ ವರ್ಷದ ಕೊಡುಗೆಯಾಗಿ ಬಡ್ತಿ ನೀಡಿದೆ.
ಅವರನ್ನು ಹರ್ಯಾಣ ಸರ್ಕಾರದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಈ ಅಶೋಕ್ ಖೇಮ್ಕಾ ಮತ್ತಾರೂ ಅಲ್ಲ, ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾಗೆ ಸಂಬಂಧಿಸಿದ ಭೂಹಗರಣ ಸೇರಿದಂತೆ ಹಲವು ಹಗರಣ ಬಯಲಿಗೆಳೆದ ದಕ್ಷ ಅಧಿಕಾರಿ. ಇದರಿಂದಾಗಿಯೇ ಪ್ರಮುಖ ರಾಜಕೀಯ ನಾಯಕರ ಕೆಂಗಣ್ಣಿಗೆ ಗುರಿಯಾಗಿ ಸತತವಾಗಿ ವರ್ಗಾವಣೆ ಶಿಕ್ಷೆ ಅನುಭವಿಸಿದ್ದರು.
ರಾಬರ್ಟ್ ವಾದ್ರಾ ಹಾಗೂ ಡಿಎಲ್‌ಎಫ್ ಕಂಪೆನಿಗಳ ನಡುವೆ ಏರ್ಪಟ್ಟಿದ್ದ ಭೂವ್ಯವಹಾರಕ್ಕೆ ಸಂಬಂಧಿಸಿದಂತೆ ಭೂಮಿ ಪರಿವರ್ತನೆಯನ್ನು ಕೇಮ್ಕಾ ರದ್ದುಗೊಳಿಸಿದ್ದರು. ಇದರಿಂದಾಗಿ ವಾದ್ರಾ ಅವರ ಭೂ ಹಗರಣ ಬೆಳಕಿಗೆ ಬಂದಿತ್ತು. ಈ ವಿಚಾರದಲ್ಲಿ ಖೇಮ್ಕಾ ಅವರು ಅಧಿಕಾರ ವ್ಯಾಪ್ತಿ ಮೀರಿ ವರ್ತಿಸಿದ್ದಾರೆ ಎಂದು ಭೂಪಿಂದರ್ ಸಿಂಗ್ ಹೂಡಾ ನೇತೃತ್ವದ ಕಾಂಗ್ರೆಸ್ ಸರಕಾರ ದೋಷಾರೋಪ ಹೊರಿಸಿತ್ತು. ಇದೀಗ ಈ ಆರೋಪಪಟ್ಟಿಯನ್ನು ಹಾಲಿ ಮುಖ್ಯಮಂತ್ರಿ ಮನೋಹರ ಲಾಲ್ ಕಟ್ಟರ್ ಅವರ ನಿರ್ದೇಶನದ ಮೇರೆಗೆ ಕೈಬಿಡಲಾಗಿತ್ತು. ಇದರಿಂದಾಗಿ ಖೇಮ್ಕಾ ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


