2016 ರಲ್ಲಿ ವಿದೇಶ ಪ್ರವಾಸ ಕಡಿಮೆ ಮಾಡಲು ಮೋದಿ ನಿರ್ಣಯ
ತೀವ್ರ ಟೀಕೆಗಳ ನಂತರ ಕೊನೆಗೂ ಪ್ರಧಾನಿ ನರೇಂದ್ರ ಮೋದಿ 2016ರಲ್ಲಿ ವಿದೇಶ ಪ್ರವಾಸಗಳನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ....

ನವದೆಹಲಿ: ತೀವ್ರ ಟೀಕೆಗಳ ನಂತರ ಕೊನೆಗೂ ಪ್ರಧಾನಿ ನರೇಂದ್ರ ಮೋದಿ 2016ರಲ್ಲಿ ವಿದೇಶ ಪ್ರವಾಸಗಳನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ. ತುಂಬಾ ಅಗತ್ಯವಿರುವ ಕಾರ್ಯಕ್ರಮ ಹಾಗೂ ಭೇಟಿಗಳಿಗೆ ಮಾತ್ರ ವಿದೇಶಕ್ಕೆ ತೆರಳಲು ನಿರ್ಣಯ ಕೈ ಗೊಂಡಿದ್ದಾರೆ.
ವಿದೇಶ ಪ್ರವಾಸಗಳನ್ನು ಆದಷ್ಟು ಕಡಿಮೆ ನಿಗದಿಪಡಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಮೋದಿ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಸ್ಪಂದಿಸಿರುವ ವಿದೇಶಾಂಗ ಸಚಿವಾಲಯ 2016ರ ಜೂನ್ವರೆಗೆ ಕೇವಲ ಎರಡು ವಿದೇಶ ಪ್ರವಾಸ ಮಾತ್ರ ನಿಗದಿಪಡಿಸಿದೆ ಎನ್ನಲಾಗಿದೆ.
ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ 19 ತಿಂಗಳಲ್ಲಿ 33 ದೇಶಗಳಿಗೆ ಭೇಟಿ ನೀಡಿದ್ದು, ವಿಶ್ವದ 2ನೇ 3ರಷ್ಟು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


