ದೇಶ

ಮೋದಿ ಉತ್ತಮ ಮಾತುಗಾರ: ಶಶಿ ತರೂರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತಮ ಮಾತುಗಾರರಾಗಿದ್ದಾರೆ ಎಂದು ಮಾಜಿ ಕೇಂದ್ರ...

ಮೋದಿ ಉತ್ತಮ ಮಾತುಗಾರ: ಶಶಿ ತರೂರ್
ಮಾಜಿ ಕೇಂದ್ರ ಸಚಿವ ಶಶಿ ತರೂರ್
Published On :

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತಮ ಮಾತುಗಾರರಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಶಶಿ ತರೂರ್ ಹೇಳಿದ್ದಾರೆ.

ಈ ಹಿಂದೆ ನರೇಂದ್ರ ಮೋದಿ ಅವರನ್ನು ಹೊಗಳಿ ಹುದ್ದೆ ಕಳೆದುಕೊಂಡಿದ್ದ ಕಾಂಗ್ರೆಸ್ ಮಾಜಿ ಸಚಿವ ಶಶಿ ತರೂರ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದು, ಮೋದಿ ಒಬ್ಬ ಉತ್ತಮ ಸಂವಹನಗಾರ ಎಂದು ಹೇಳಿದ್ದಾರೆ.

ಎನ್‌ಡಿಎ ಸರ್ಕಾರದ ದೊಡ್ಡ ಶಕ್ತಿಯೇ ಉತ್ತಮ ಸಂಹವನ. ಇದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಘೋಷಣಾ ವಾಕ್ಯಗಳು ಜನರ ಮನಮುಟ್ಟುವಂತಿರುತ್ತದೆ ಎಂದು ತರೂರ್ ಹೇಳಿದ್ದಾರೆ.

ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಶಶಿ ತರೂರ್, ಹಿಂದಿನಿಂದಲೂ ಹಿಂದುತ್ವವನ್ನು ಅನುಷ್ಠಾನಕ್ಕೆ ತರಲು ಬಿಜೆಪಿ ಸಂಸದರು ಪ್ರತಿಕ್ಷಣವೂ ಪರಿತಪಿಸುತ್ತಿದ್ದಾರೆ. ಆದರೆ ಮೋದಿ ಅವರು ಈ ಕುರಿತು ಕಠಿಣ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲರಾಗುತ್ತಿದ್ದು, ಹಿಂದುತ್ವದ ಹೇಳಿಕೆಗಳನ್ನು ನೀಡಿ ಪ್ರಚೋದನೆ ನೀಡುತ್ತಿರುವ ಸಂಪುಟ ಸದಸ್ಯರ ತಡೆಯುವ ಬದಲು ತಾವೇ ಮೌನವಾಗಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.