ಎಲ್ಲಾ ರಾಜಕೀಯ ಪಕ್ಷಗಳ ದೇಣಿಗೆ ಬಗ್ಗೆ ಎಸ್‌ಐಟಿ ತನಿಖೆಯಾಗಲಿ: ಆಪ್

ನವದೆಹಲಿ: ನಕಲಿ ಕಂಪನಿಗಳ ದೇಣಿಗೆ ಕುರಿತಂತೆ ಆಮ್ ಆದ್ಮಿ ಪಕ್ಷದ ವಿರುದ್ಧ ಆರೋಪ ಬಂದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಲ್ಲಾ ರಾಜಕೀಯ ಪಕ್ಷಗಳ ದೇಣಿಗೆ ಹಣದ ಕುರಿತಂತೆ ಎಸ್ಐಟಿ ತನಿಖೆಯಾಗಲಿ ಎಂದು ಹೇಳಿದ್ದಾರೆ.
ದೇಣಿಗೆ ಕುರಿತಂತೆ ಎಸ್ಐಟಿ ತನಿಖೆಯಾಗಲಿ ಎಂದು ಹೇಳಿರುವ ಕೇಜ್ರಿವಾಲ್, ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.
ಪಕ್ಷಗಳಿಗೆ ಹರಿದು ಬರುತ್ತಿರುವ ದೇಣಿಗೆ ಹಣ ಕುರಿತಂತೆ ತನಿಖೆಯಾಗಲಿ ಆಗ ಮಾತ್ರ ಪಾರದರ್ಶಕತೆ ತರಲು ಸಾಧ್ಯ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ಬೋಗಸ್ ಕಂಪನಿಗಳಿಂದ ಹಣ ಬಂದಿದೆ ಎಂದು ಆಮ್ ಆದ್ಮಿ ಪಕ್ಷದಿಂದ ಹೊರಬಂದು ಆಪ್ ಸ್ವಯಂ ಸೇವಾ ಕ್ರಿಯಾ ಮಂಚ್(ಅವಂ) ಸ್ಥಾಪಿಸಿಕೊಂಡಿರುವ ಗುಂಪೊಂದು ಆರೋಪಿಸಿತ್ತು. ಈ ಸಂಬಂಧ ಎಸ್ಐಟಿ ತನಿಖೆಯಾಗಲಿ ಎಂದು ಕೇಜ್ರಿವಾಲ್ ಸುಪ್ರೀಂಕೋರ್ಟ್ಗೆ ಮನವಿ ಮಾಡಲಿದ್ದಾರೆ.
ಹವಾಲ ಹಣ ಕುರಿತಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಆಪ್ ಪಕ್ಷಗಳ ವಿರುದ್ಧ ಎಸ್‌ಐಟಿ ತನಿಖೆಯಾಗಲಿ ಎಂದು ಆಪ್‌ನ ಐವರು ಮುಖಂಡರು ಮಂಗಳವಾರ ಬಗ್ಗೆ ಸುಪ್ರೀಂಕೋರ್ಟ್ ಮನವಿ ಸಲ್ಲಿಸಲಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಕಳೆದ ಆಗಸ್ಟ್‌ನಲ್ಲಿ ಆಪ್ ಪಕ್ಷದಿಂದ ಹೊರಬಂದು ಆವಂ ಪಕ್ಷ ಸ್ಥಾಪಿಸಿಕೊಂಡಿರುವ ಕೆಲವರು ಆಮ್ ಆದ್ಮಿ ಪಕ್ಷಕ್ಕೆ 51 ಬೋಗಸ್ ಕಂಪನಿಗಳಿಂದ ಹಣ ಬಂದಿದೆ. ಈ ಪೈಕಿ ನಾಲ್ಕು ಕಂಪನಿಗಳು ತಲಾ 50 ಲಕ್ಷ ರು. ಹಣ ನೀಡಿವೆ. ಇದರಲ್ಲಿ ಗಮನಿಸಬೇಕಾದ ಪ್ರಮುಖ ವಿಷಯವೆನೆಂದರೆ ಒಂದು ಕಂಪನಿಯ ವಿಳಾಸದಲ್ಲಂತೂ ಗುಡಿಸಲು ಪತ್ತೆಯಾಗಿದೆ ಎಂದು ಆರೋಪ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


