ಪಾಕ್ ಮಿಲಿಟರಿ ಪರೇಡ್ ಗೆ ಚೀನಾ ಅಧ್ಯಕ್ಷ ಅತಿಥಿ?
ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭಕ್ಕೆ ಅತಿಥಿಯಾಗಿ ಭಾರತಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ...

ಇಸ್ಲಾಮಾಬಾದ್: ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭಕ್ಕೆ ಅತಿಥಿಯಾಗಿ ಭಾರತಕ್ಕೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿ ನೀಡಿದ್ದ ಬೆನ್ನಲ್ಲೇ, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಪಾಕಿಸ್ತಾನ ಮಾರ್ಚ್ 23ರಂದು ನಡೆಯಲಿರುವ ರಾಷ್ಟ್ರೀಯ ದಿನಾಚರಣೆಗೆ ಅತಿಥಿಯನ್ನಾಗಿ ಆಹ್ವಾನಿಸಲಿದೆ ಎಂದು ಮೂಲಗಳು ತಿಳಿಸಿವೆ.
ಏಳು ವರ್ಷಗಳ ನಂತರ ಪಾಕಿಸ್ತಾನ ಮಿಲಿಟರಿ ಪರೇಡ್ ಹಮ್ಮಿಕೊಂಡಿದ್ದು, ರಾಷ್ಟ್ರೀಯ ದಿನಾಚರಣೆ ಸಮಾರಂಭಕ್ಕೆ ಅತಿಥಿಯಾಗಿ ಕ್ಸಿ ಜಿನ್ ಪಿಂಗ್ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಸಮಾರಂಭದ ಸ್ಥಳ ಇನ್ನು ನಿಗದಿಯಾಗಿಲ್ಲ.
ಮಾರ್ಚ್ 23ರಂದು ನಡೆಯಲಿರುವ ಮಿಲಿಟರಿ ಪರೇಡ್‌ಗೆ ಕ್ಸಿ ಜಿನ್ ಪಿಂಗ್ ಅವರನ್ನು ಅತಿಥಿಯನ್ನಾಗಿ ಆಹ್ವಾನಿಸಲು ನಿರ್ಧರಿಸಿರುವ ಮೂಲಕ ಪಾಕಿಸ್ತಾನ ಭಾರತವನ್ನು ಅನುಕರಣೆ ಮಾಡಿದಂತಾಗುತ್ತದೆ.
ಇಸ್ಲಾಮಾಬಾದ್‌ನಲ್ಲಿ ಮಿಲಿಟರಿ ಪರೇಡ್ ನಡೆಸುವ ಸಾಧ್ಯತೆಯಿದೆ ಎಂಬ ಮಾತು ಕೇಳಿಬಂದಿದ್ದು, ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನಲೆಯಲ್ಲಿ ಮೂರು ಶಸ್ತ್ರಾಸ್ತ್ರ ಪಡೆಯ ಜಂಟಿ ಮೆರವಣಿಗೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಪಾಕ್‌ನ ಅಂದಿನ ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ಅವಧಿಯಲ್ಲಿ 2008 ಮಾರ್ಚ್ 23ರಂದು ಮಿಲಿಟರಿ ನಡೆಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


