ಬಿಜೆಪಿ ಮುಖಪುಟ ಜಾಹೀರಾತಿಗೆ ಹಣ ಎಲ್ಲಿಂದ ಬಂತು?: ಆಪ್
ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಶುಕ್ರವಾರ ತಿರುಗೇಟು ನೀಡಿರುವ ಆಮ್ ಆದ್ಮಿ ಪಕ್ಷ(ಎಎಪಿ), ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ನೀಡಿರುವ ಫುಲ್-ಪೇಜ್ ಜಾಹೀರಾತಿಗೆ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದೆ.

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಶುಕ್ರವಾರ ತಿರುಗೇಟು ನೀಡಿರುವ ಆಮ್ ಆದ್ಮಿ ಪಕ್ಷ(ಎಎಪಿ), ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ನೀಡಿರುವ ಫುಲ್-ಪೇಜ್ ಜಾಹೀರಾತಿಗೆ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದೆ.
ಮುಖಪುಟ ಜಾಹೀರಾತಿನ ಹಣದ ಮೂಲ ಯಾವುದು ಎಂಬುದನ್ನು ಬಿಜೆಪಿ ಬಹಿರಂಗಪಡಿಸಬೇಕು ಎಂದು ಎಎಪಿ ನಾಯಕ ಆಶುತೋಷ್ ಅವರು ಆಗ್ರಹಿಸಿದ್ದಾರೆ.
ಇಂತಹ ಜಾಹೀರಾತುಗಳನ್ನು ಪ್ರಕಟಿಸಲು ಬಿಜೆಪಿಗೆ ಹಣ ಎಲ್ಲಿಂದ ಬರುತ್ತಿದೆ? ಎಂದು ಪ್ರಶ್ನಿಸಿರುವ ಆಶುತೋಷ್, ಟವಿಯಲ್ಲಿ ಇಂತಹ ಜಾಹೀರಾತುಗಳನ್ನು ನಿಷೇಧಿಸಲಾಗಿದೆ. ಆದರೆ ಪತ್ರಿಕೆಗಳಿಗೆ ಏಕೆ ಅವಕಾಶ ನೀಡಲಾಗಿದೆ ಎಂದು ಕೇಳಿದ್ದಾರೆ.
ಬಹಿರಂಗ ಚುನಾವಣಾ ಪ್ರಚಾರ ಅಂತ್ಯವಾದ ನಂತರ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವಂತಿಲ್ಲ ಎಂಬ ನಿಯಮ ಇದೆ. ಆದರೆ ಮುದ್ರಣ ಮಾಧ್ಯಮಕ್ಕೆ ಏಕೆ ಈ ನಿಮಯ ಅನ್ವಯವಾಗುವುದಿಲ್ಲ ಎಂದು ಆಶುತೋಷ್ ಪ್ರಶ್ನಿಸಿದ್ದಾರೆ. ಟಿವಿ ಜಾಹೀರಾತಿಗೆ ನಿರ್ಬಂಧ ಹೇರಿರುವ ಚುನಾವಣಾ ಆಯೋಗ ಪತ್ರಿಕಾ ಜಾಹೀರಾತಿಗೂ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.
ಮತ್ತೊಬ್ಬ ಎಎಪಿ ನಾಯಕ ಮನಿಶ್ ಸಿಸೋಡಿಯಾ ಅವರು ಸಹ ಬಿಜೆಪಿ ಹಣದ ಮೂಲವನ್ನು ಪ್ರಶ್ನಿಸಿದ್ದು, ಮುಖಪುಟ ಜಾಹೀರಾತಿಗೆ ಕೋಟ್ಯಾಂತರ ರುಪಾಯಿ ಬೇಕು. ಈ ಹಣ ಎಲ್ಲಿಂದ ಬಂತು ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


