ಇಂಡೋ-ಮಾಯನ್ಮಾರ್ ಗಡಿಯಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು
ಮಾಯನ್ಮಾರ್ ಗಡಿಭಾಗದಲ್ಲಿ ಬಾಂಬ್ ಸ್ಫೋಟಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ...

ಇಂಫಾಲಾ: ಇಂಡೋ-ಮಾಯನ್ಮಾರ್ ಗಡಿಭಾಗದಲ್ಲಿ ಬಾಂಬ್ ಸ್ಫೋಟಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮಣಿಪುರದ ಉಖ್ರುಲ್ ಜಿಲ್ಲೆಗೆ ಹೊಂದಿಕೊಂಡಿರುವ ಮಾಯನ್ಮಾರ್ ಗಡಿಭಾಗದಲ್ಲಿ ಇಂದು ಬೆಳಿಗ್ಗೆ ಪ್ರಬಲ ಬಾಂಬ್ ಸ್ಫೋಟಿಸಿ ಓರ್ವ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತ-ಮ್ಯಾನ್ಮಾರ್ ಗಡಿಯ ತರೋಂಗ’ ಎಂಬಲ್ಲಿ ಈ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆಯ ಯೋಧರನ್ನು ಗುರಿಯಾಗಿಟ್ಟುಕೊಂಡು ಉಗ್ರರು ಈ ಕೃತ್ಯ ಎಸಗಿದ್ದಾರೆ. ಸೈನಿಕರ ವಾಹನ ತೆರಳುವ ರಸ್ತೆಯ ಬದಿಯಲ್ಲಿ ನೆಲದ ಒಳಗಡೆ ಈ ಪ್ರಬಲ ಬಾಂಬ್ ಅಡಗಿಸಿಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರು ಸಮೀಪದ ಪೊದೆಗಳಲ್ಲಿ ಅಡಗಿರುವ ಸಾಧ್ಯತೆಯಿದ್ದು, ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರದೇಶದಲ್ಲಿ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯ ಸೈನಿಕರನ್ನು ನಿಯೋಜಿಸಲಾಗಿದೆ. ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಬಾಂಬ್ ಸ್ಫೋಟಿಸಿದ ಶಬ್ದ ಒಂದು ಕಿಲೋ ಮೀಟರ್‌ಗೂ ಹೆಚ್ಚು ದೂರಕ್ಕೆ ಕೇಳಿದೆ. ಇದುವರೆಗೆ ಯಾರೂ ಈ ಸ್ಫೋಟದ ಹೊಣೆ ಹೊತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


