ನೀತಿ ಆಯೋಗದ ಮೊದಲ ಸಭೆ
ಯೋ ಜನಾ ಆಯೋಗದ ಜಾಗದಲ್ಲಿ ಹೊಸದಾಗಿ ರಚನೆಯಾಗಿರುವ ನೀತಿ ಆಯೋಗದ ಮೊದಲ ಸಭೆ ಶುಕ್ರವಾರ ನವದೆಹಲಿಯಲ್ಲಿ...

ನವದೆಹಲಿ: ಯೋಜನಾ ಆಯೋಗದ ಜಾಗದಲ್ಲಿ ಹೊಸದಾಗಿ ರಚನೆಯಾಗಿರುವ ನೀತಿ ಆಯೋಗದ ಮೊದಲ ಸಭೆ ಶುಕ್ರವಾರ ನವದೆಹಲಿಯಲ್ಲಿ ನಡೆಯಿತು. ಖ್ಯಾತ ಆರ್ಥಿಕ ತಜ್ಞರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ತೈಲ ದರ ಇಳಿಕೆ ಮತ್ತು ಸದ್ಯದ ವಿಶ್ವ ಆರ್ಥಿಕ ಪರಿಸ್ಥಿ ತಿಯ ಸೂಕ್ತ ಲಾಭ ಪಡೆಯುವ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು. ಜತೆಗೆ, ಹೂಡಿಕೆ ದಾರರನ್ನು ವಾಪಸ್ ಕರೆತರುವ ಮತ್ತು ಬೆಳವಣಿ ಗೆ ಆಧರಿತ ಬಜೆಟ್ ಅನ್ನು ರೂಪಿಸಲು ನೆರವು ನೀಡುವಂತೆಯೂ ಆರ್ಥಿಕ ತಜ್ಞರಿಗೆ ಪ್ರಧಾನಿ ಮನವಿ ಮಾಡಿದರು. ಜನರ ನಿರೀಕ್ಷೆ ಗಳನ್ನು ಈಡೇರಿಸಲು ಸದ್ಯದ ವಿಶ್ವ ಆರ್ಥಿಕ ಪರಿಸ್ಥಿತಿಯ ಲಾಭ ಪಡೆದು ದೇಶ ಶೀಘ್ರಗತಿಯಲ್ಲಿ ಬೆಳವಣಿಗೆ ಸಾಧಿಸ ಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳ ಬೇಕು ಎಂದು ಮೋದಿ ಹೇಳಿದ್ದಾರೆ. ಸಭೆ ಕುರಿತು ಮಾಹಿತಿ ನೀಡಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಆರ್ಥಿಕ ಪರಿಸ್ಥಿತಿ ಮತ್ತು ಹೂಡಿಕೆ, ಬೆಳವಣಿಗೆಗೆ ಪೂರಕ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಲಾಯಿತು.
ಇದೇ ವೇಳೆ, ಕೇಂದ್ರ ಬಜೆಟ್ಗೆ ಸಂಬಂಧಿಸಿ ಆರ್ಥಿಕ ತಜ್ಞರಿಂದ ಅಭಿಪ್ರಾಯಗಳನ್ನೂ ಪಡೆಯಲಾಯಿತು ಎಂದು ಹೇಳಿದ್ದಾರೆ. ಇದೇ ವೇಳೆ, ಮೋದಿ ಅವರು ಸಹಕಾರ
ಒಕ್ಕೂಟ ವ್ಯವಸ್ಥೆ ಮತ್ತು ದೇಶದ ಅಭಿವೃದ್ಧಿ ಗಾಗಿ ರಾಜ್ಯಗಳ ನಡುವೆ ಆರೋಗ್ಯಕರ ಸ್ಪರ್ಧೆಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಜತೆಗೆ ಪ್ರಧಾನಮಂತ್ರಿ ಜನಧನ್ ಯೋ ಜನೆ,
ಅಡುಗೆ ಅನಿಲ ಸಬ್ಸಿಡಿ ನೇರ ಗ್ರಾಹಕರ ಖಾತೆಗೆ ಜಮೆ, ಸ್ವಚ್ಛ ಭಾರತದಂಥ ಯೋಜನೆಗಳ ಕುರಿತು ಪ್ರಧಾನಿ ಮಾತನಾಡಿದ್ದಾರೆ. 8ರಂದು ಸಿಎಂಗಳ ಸಭೆ ನೀತಿ ಆಯೋಗದ ಆಡಳಿತ ಸಮಿತಿಯ ಮೊದಲ ಸಭೆ ಭಾನುವಾರ ನಡೆಯಲಿದೆ. ಈ ಸಮಿತಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


