ದೇಶ

ಬಿಹಾರ ರಾಜಕೀಯ ಬಿಕ್ಕಟ್ಟು: ಮಾಂಝಿ ಉಚ್ಛಾಟನೆ, 'ಹೈ' ಮೆಟ್ಟಿಲೇರಿದ ಬೆಂಬಲಿಗರು

ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಪಕ್ಷದ ವಿರುದ್ಧವೇ ಬಂಡಾಯವೆದಿದ್ದ್ದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ...

ಬಿಹಾರ ರಾಜಕೀಯ ಬಿಕ್ಕಟ್ಟು: ಮಾಂಝಿ ಉಚ್ಛಾಟನೆ, 'ಹೈ' ಮೆಟ್ಟಿಲೇರಿದ ಬೆಂಬಲಿಗರು
ಜಿತನ್ ರಾಮ್ ಮಾಂಝಿ
Published On :

ಪಾಟ್ನಾ: ಬಿಹಾರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಪಕ್ಷದ ವಿರುದ್ಧವೇ ಬಂಡಾಯವೆದಿದ್ದ್ದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಆದರೆ ಮಾಂಝಿ ಉಚ್ಚಾಟನೆ ಪ್ರಶ್ನಿಸಿ ಅವರ ಬೆಂಬಲಿಗರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಜೆಡಿಯು ಅಧ್ಯಕ್ಷ ಶರದ್ ಯಾದವ್ ಅವರು ಫೆಬ್ರವರಿ 7ರಂದು ಕರೆದಿದ್ದ ಶಾಸಕಾಂಗ ಪಕ್ಷದ ಸಭೆ ಅಸಂವಿಧಾನಿ ಎಂದಿರುವ ಜೆಡಿಯು ಶಾಸಕ ರಾಜೇಶ್ವರ್ ರಾಜ್ ಅವರು, ಮಾಂಝಿ ಉಚ್ಚಾಟನೆ ಪ್ರಶ್ನಿಸಿಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಜೆಡಿಯು ಮುಖ್ಯಸ್ಥ ಶರದ್ ಯಾದವ್ ಅವರು ಮಾಂಝಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಳಿಸಿದ್ದರು.

ಈ ಮಧ್ಯೆ, ಇಂದು ಮಧ್ಯಾಹ್ನ ತಮ್ಮ ಬೆಂಬಲಿಗ ಶಾಸಕರೊಂದಿಗೆ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಜೆಡಿಯು ನೂತನ ಶಾಸಕಾಂಗ ಪಕ್ಷದ ನಾಯಕ ನಿತೀಶ್ ಕುಮಾರ್ ಸರ್ಕಾರ ರಚನೆಯ ಪ್ರಸ್ತಾಪ ಸಲ್ಲಿಸಲಿದ್ದಾರೆ.

ಈ ಸಂಬಂಧ ನಿನ್ನೆ ಪಕ್ಷದ ರಾಜ್ಯಾಧ್ಯಕ್ಷ ಬಶಿಂತಾ ನಾರಾಯಣ್ ಸಿಂಗ್ ಅವರ ನಿಯೋಗ ರಾಜಭವನಕ್ಕೆ ತೆರಳಿ ನಿತೀಶ್ ಅವರಿಗೆ 130 ಶಾಸಕರ ಬೆಂಬಲ ಇರುವ ಪತ್ರವನ್ನು ಸಲ್ಲಿಸಿದ್ದರು. ಆರ್‌ಜೆಡಿ, ಕಾಂಗ್ರೆಸ್ ಹಾಗೂ ಎಡಪಕ್ಷಗಳ ಶಾಸಕರೂ ನಿತೀಶ್‌ಗೆ ಬೆಂಬಲ ನೀಡಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.