ರೈಲ್ವೆ ಬಜೆಟ್‍ನಲ್ಲಿ ಮೇಕ್ ಇನ್ ಇಂಡಿಯಾಗೆ ಒತ್ತು?
ರೈಲ್ವೆ ಸಚಿವ ಸುರೇಶ್ ಪ್ರಭು ಅವರು ತಮ್ಮ ಚೊಚ್ಚಲ ಬಜೆಟ್‍ನಲ್ಲಿ ಪ್ರಧಾನಿ ಮೋದಿ ಅವರ...

ನವದೆಹಲಿ: ರೈಲ್ವೆ ಸಚಿವ ಸುರೇಶ್ ಪ್ರಭು ಅವರು ತಮ್ಮ ಚೊಚ್ಚಲ ಬಜೆಟ್‍ನಲ್ಲಿ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಮೇಕ್ ಇನ್ ಇಂಡಿಯಾಗೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ.
ಈ ಯೋಜನೆಯಡಿ ಚೆನ್ನೈನಲ್ಲಿ ಗಂಟೆಗೆ 200 ಕಿ.ಮೀ. ವೇಗದಲ್ಲಿ ಸಂಚರಿಸುವ ಬೋಗಿ ನಿರ್ಮಾಣ ಘಟಕ ಸ್ಥಾಪಿಸುವ ಬಗ್ಗೆ ಪ್ರಭು ಘೋಷಣೆ ಮಾಡುವ ಸಾಧ್ಯತೆಯಿದೆ. ಸದ್ಯಕ್ಕೆ ಭಾರತದಲ್ಲಿ ಗಂಟೆಗೆ 160 ಕಿ.ಮೀ. ವೇಗದಲ್ಲಿ ಸಂಚರಿಸುವ ಬೋಗಿಗಳನ್ನಷ್ಟೇ ನಿರ್ಮಾಣ ಮಾಡಲಾಗುತ್ತಿದೆ. ಇದೇ ವೇಳೆ, ಇಂಟರ್ ಸಿಟಿ ಸೇವೆಗಳಿಗೆ ಎಸಿ ರೇಕುಗಳನ್ನು ಪರಿಚಯಿಸುವ ಮೂಲಕ ಪ್ರಯಾಣವನ್ನು ಸುಖಕರಗೊಳಿಸುವ ಪ್ರಸ್ತಾ ಪವನ್ನೂ ಬಜೆಟ್‍ನಲ್ಲಿ ಸೇರಿಸಲಾಗಿದೆ.
ಇಷ್ಟೇ ಅಲ್ಲದೆ, ಹೈಸ್ಪೀಡ್ ರೈಲು, ರೈಲ್ವೆಯ ಹಣಕಾಸು ಆರೋಗ್ಯ, ಈಶಾನ್ಯ ರಾಜ್ಯಗಳಿಗೆ ಸಂಪರ್ಕ, ವಿಶ್ವದರ್ಜೆಯ ಉತ್ಪಾದನಾ ಘಟಕ ಸ್ಥಾಪನೆ, ಅತ್ಯಾಧುನಿಕ ತಂತ್ರಜ್ಞಾನ, ಆಟೋಮೇಷನ್ ಬಳಕೆ, ರೈಲ್ವೆ ಫ್ಯಾಕ್ಟರಿಗಳಲ್ಲಿ ಉತ್ತಮ ಗುಣಮಟ್ಟ ಕಾಪಾಡಿಕೊಳ್ಳುವಿಕೆ, ಗಂಟೆಗೆ 200 ಕಿ.ಮೀ. ವೇಗದಲ್ಲಿ ಸಂಚರಿಸುವ ಸೆಮಿ-ಹೈಸ್ಪೀಡ್ ಬೋಗಿಗಳ ದೇಶೀಯ ಉತ್ಪಾದನೆ, ಲೋಕೋಮೋಟಿವ್ ಬಿಡಿಭಾಗಗಳನ್ನು ದೇಶದಲ್ಲಿಯೇ ಉತ್ಪಾದಿಸುವಿಕೆಗೂ ರೈಲ್ವೆ ಸಚಿವರು ಒತ್ತು ನೀಡುವ ಸಾಧ್ಯತೆಯಿದೆ. ಜತೆಗೆ, ರೈಲ್ವೆಯನ್ನು ಅಂಗವಿಕಲ ಸ್ನೇಹಿಯಾಗಿಸಲು ಮುಂದಾಗಿರುವ ಸಚಿವ ಪ್ರಭು ಅವರು ದೃಷ್ಟಿ ನ್ಯೂನತೆಯಿರುವ ಪ್ರಯಾಣಿಕರಿಗೆ ನೆರವಾಗಲೆಂದು ಎಲ್ಲ ಹೊಸ ಬೋಗಿಗಳಲ್ಲಿ ಬ್ರೈಲ್ ಲಿಪಿಯಿರುವ ಸೂಚನಾ ಫಲಕಗಳನ್ನು ಅಳವಡಿಸುವ ಬಗ್ಗೆಯೂ ಘೋಷಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


