ರೋಹಟಕ್ 'ಹತ್ಯಾಚಾರ': 9ನೇ ಆರೋಪಿ ಆತ್ಮಹತ್ಯೆ
ನಿರ್ಭಯಾ ಪ್ರಕರಣವನ್ನು ನೆನಪಿಸುತ್ತಿರುವ ರೋಹಟಕ್ 'ಹತ್ಯಾಚಾರ' ಪ್ರಕರಣದ 9ನೇ ಆರೋಪಿ ಆತ್ಮಹತ್ಯೆಗೆ...

ನವದೆಹಲಿ: ನಿರ್ಭಯಾ ಪ್ರಕರಣವನ್ನು ನೆನಪಿಸುತ್ತಿರುವ ರೋಹಟಕ್ 'ಹತ್ಯಾಚಾರ' ಪ್ರಕರಣದ 9ನೇ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಹರ್ಯಾಣದ ರೋಹಟಕ್‌ನಲ್ಲಿ ಕಳೆದ ಫೆಬ್ರವರಿ 4ರಂದು ನಡೆದಿದ್ದ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿದ್ದು, 9ನೇ ಆರೋಪಿಗಾಗಿ ಶೋಧ ನಡೆಸುತ್ತಿದ್ದರು. ಆದರೆ ಪೊಲೀಸ್ ಮೂಲಗಳ ಪ್ರಕಾರ ನಾಪತ್ತೆಯಾಗಿದ್ದ ಪ್ರಕರಣದ 9ನೇ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಅತ್ಯಾಚಾರ ಪ್ರಕರಣ ಸಂಬಂಧ 8 ಮಂದಿ ಆರೋಪಿಗಳ ಬಂಧನದಿಂದಾಗಿ ಭಯಭೀತನಾಗಿದ್ದ 9ನೇ ಆರೋಪಿ ವಿಷ ಸೇವಿಸಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಪೊಲೀಸರು ವಿಚಾರಣೆ ನಡೆಸಿದ್ದು, ರೋಹಟಕ್ ಅತ್ಯಾಚಾರ ಪ್ರಕರಣದಲ್ಲಿ ಈತ ಕೂಡ ಭಾಗಿಯಾಗಿರುವ ವಿಚಾರ ತಿಳಿದಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ 9ನೇ ಆರೋಪಿ ಇಂದು ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ದೆಹಲಿಯಿಂದ ಕೇವಲ 80 ಕಿ.ಮೀ. ದೂರದಲ್ಲಿರುವ ರೋಹಟಕ್ ಸಮೀಪದ ಗ್ರಾಮದಲ್ಲಿ 8 ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


