ಹಾಸ್ಟೆಲ್‌ನಲ್ಲಿ ಮಗವಿಗೆ ಜನ್ಮ ನೀಡಿದ ಇಬ್ಬರು ಅಪ್ರಾಪ್ತೆಯರು
ಇಬ್ಬರು ಅಪ್ರಾಪ್ತ ಶಾಲಾ ವಿದ್ಯಾರ್ಥಿನಿಯರು ಸರ್ಕಾರಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ...

ಕೊರಪುಟ್/ಬೆರ್ಹಾಮ್‌ಪುರ್: ಇಬ್ಬರು ಅಪ್ರಾಪ್ತ ಶಾಲಾ ವಿದ್ಯಾರ್ಥಿನಿಯರು ಸರ್ಕಾರಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
ಕೊರಪುಟ್ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕಾಗಿಯೇ ವಿಶೇಷವಾಗಿ ನಡೆಸಲಾಗುತ್ತಿದ್ದ ಉಮುರಿ ಆಶ್ರಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಇತ್ತೀಚೆಗಷ್ಟೆ ಕಂಧಾಮಾಲ್ಲಿ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದಳು. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯರ ಬಗ್ಗೆ ಶಾಲಾ ಆಡಳಿತ ಮಂಡಳಿ ಗಮನ ಹರಿಸದೇ ಹಾಗೂ ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ಆಗಾಗ್ಗೆ ನಡೆಸಬೇಕಿದ್ದ ವೈದ್ಯಕೀಯ ಪರೀಕ್ಷೆ ನಡೆಸದ ಹಿನ್ನಲೆಯಲ್ಲಿ ಶಾಲೆಯ ಮುಖ್ಯೋಪಧ್ಯಾಯ ಕೈಲಾಶ್ ಚರಣ್ ಬ್ರಹ್ಮ ಮತ್ತು ಹಾಸ್ಟೆಲ್‌ನ ಅಧೀಕ್ಷಕ ಸಬಿತ ಗುರು ಅವರನ್ನು ಬಂಧಿಸಿದ್ದಾರೆ. ಇಂದು ಅವರನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ 6ನೇ ತರಗತಿ ವಿದ್ಯಾರ್ಥಿನಿ ಶಾಲೆಗೆ ದಾಖಲಾಗಿದ್ದಳು. ವಿದ್ಯಾರ್ಥಿನಿಯು ತಮ್ಮ ಸಂಬಂಧಿಕರಿಂದಲೇ ಅತ್ಯಾಚಾರಕ್ಕೊಳಗಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


