ದೇಶ

ಆಪ್ ಸುನಾಮಿಗೆ ಕೊಚ್ಚಿ ಹೋದ ಮೋದಿ ಅಲೆ: ಶಿವಸೇನೆ

ಆಮ್ ಆದ್ಮಿ ಪಕ್ಷಕ್ಕೆ ದೊರೆತ ಜನ ಬೆಂಬಲದ ಸುನಾಮಿಗೆ ಮೋದಿ ಅಲೆ ಕೊಚ್ಚಿಕೊಂಡು ಹೋಗಿದೆ ಎಂದು ಶಿವಸೇನೆ..

ಆಪ್ ಸುನಾಮಿಗೆ ಕೊಚ್ಚಿ ಹೋದ ಮೋದಿ ಅಲೆ: ಶಿವಸೇನೆ
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ (ಸಂಗ್ರಹ ಚಿತ್ರ)
Published On :

ಮುಂಬೈ: ಆಮ್ ಆದ್ಮಿ ಪಕ್ಷಕ್ಕೆ ದೊರೆತ ಜನ ಬೆಂಬಲದ ಸುನಾಮಿಗೆ ಮೋದಿ ಅಲೆ ಕೊಚ್ಚಿಕೊಂಡು ಹೋಗಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನಲೆಯಲ್ಲಿ ಇಂದು ಮುಂಬೈಯಲ್ಲಿ ಸುದ್ದಿಗೋಷ್ಠಿ ನಡೆಸಿದ ಉದ್ಧವ್ ಠಾಕ್ರೆ ಅವರು, ದೆಹಲಿಯ ಭಾವಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಭಾಷಯ ಕೋರಿದ್ದಾರೆ. ಅಲ್ಲದೆ ತಮ್ಮದೇ ಮಿತ್ರ ಪಕ್ಷ ಬಿಜೆಪಿಗೆ ಪರೋಕ್ಷ ಟಾಂಗ್ ನೀಡಿರುವ ಉದ್ಧವ್ ಠಾಕ್ರೆ ಅವರು, ಜನರ ಬೆಂಬಲದ ಸುನಾಮಿಗೆ ಮೋದಿ ಅಲೆ ಕೊಚ್ಚಿಕೊಂಡು ಹೋಗಿದೆ ಎಂದು ವ್ಯಂಗ್ಯವಾಡಿದ್ದಾರೆ.

'ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಅಭೂತ ಪೂರ್ವ ಜಯ ಲಭಿಸಿದೆ. ಇದಕ್ಕಾಗಿ ಮೊದಲು ನಾನು ಅರವಿಂದ್ ಕೇಜ್ರಿವಾಲ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಜನತೆ ಬೆಂಬಲ ಸುನಾಮಿಯೇ ಸೃಷ್ಟಿಯಾಗಿರುವುದು ಸ್ಪಷ್ಟವಾಗಿದೆ. ಆಪ್ ಸುನಾಮಿಗೆ ಕೊಚ್ಚಿ ಮೋದಿ ಅಲೆ ಕೊಚ್ಚಿಕೊಂಡು ಹೋಗಿದ್ದು, ದೆಹಲಿ ಫಲಿತಾಂಶದಿಂದ ನಾವು ಪಾಠ ಕಲಿಯಬೇಕಿದೆ. ಲಾಠಿ ಏಟಿಗಿಂತ ಜನರ ಏಟು ದೊಡ್ಡದು. ಜನರು ತಮಗೆ ಏನು ಬೇಕೋ ಅದನ್ನೇ ಆಯ್ಕೆ ಮಾಡುತ್ತಾರೆ. ಜನರ ತೀರ್ಪು ಅಂತಿಮವಾಗಿದ್ದು, ನಮಗಾಗಿ ಜನರಲ್ಲ, ಜನರಿಗಾಗಿ ನಾವು ಎಂಬುದನ್ನು ಎಲ್ಲ ರಾಜಕಾರಣಿಗಳು ಅರಿಯಬೇಕು. ಇದಕ್ಕೆ ದೆಹಲಿ ತೀರ್ಪು ಸ್ಪಷ್ಟ ಉದಾಹರಣೆಯಾಗಿದೆ' ಎಂದು ಉದ್ಧವ್ ಠಾಕ್ರೆ ಹೇಳಿದರು.

ಕೇಂದ್ರದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಸೇರಿ ಶಿವಸೇನೆ ಸರ್ಕಾರ ರಚನೆ ಮಾಡಿದೆ. ಆದರೆ ಕಳೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಎರಡೂ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಿದ್ದವು. ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆದ ಪೈಪೋಟಿಯಲ್ಲಿನ ಅಸಮಾಧಾನದಿಂದಾಗಿ ಬಿಜೆಪಿ ಮೈತ್ರಿಯಿಂದ ಹೊರಬಂದಿತ್ತು. ಆದರೆ ಚುನಾವಣಾ ಫಲಿತಾಂಶದ ಬಳಿಕ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ಶಿವಸೇನೆ ಮತ್ತು ಬಿಜೆಪಿ ಪಕ್ಷಗಳು ಮತ್ತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.