ದೆಹಲಿಗೆ ಪೂರ್ಣಮಟ್ಟದ ರಾಜ್ಯ ಸ್ಥಾನಮಾನ: ಕೇಜ್ರಿವಾಲ್ ಒತ್ತಾಯ
ದೆಹಲಿಗೆ ಪೂರ್ಣಮಟ್ಟ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಭಾವಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ...

ನವದೆಹಲಿ: ದೆಹಲಿಗೆ ಪೂರ್ಣಮಟ್ಟ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಭಾವಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭೇಟಿ ಮಾಡಿ ಚರ್ಚಿಸಿದ್ದಾರೆ. ಕೇಜ್ರಿವಾಲ್ ಅವರು ತಮ್ಮ ಪಕ್ಷದ ಹಿರಿಯ ಸದಸ್ಯ ಮನೀಶ್ ಸಿಸೋಡಿಯಾ ಅವರೊಂದಿಗೆ ರಾಜನಾಥ್ ಸಿಂಗ್ ಅವರನ್ನು ಅವರ ದೆಹಲಿ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.
ಈ ವೇಳೆ ಕೇಜ್ರಿವಾಲ್ ದೆಹಲಿಗೆ ಸಂಪೂರ್ಣ ಮಟ್ಟದ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದ್ದಾರೆ. ಇದಲ್ಲದೆ ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಸಂಬಂಧ ಹೆಚ್ಚುವರಿ ಭಧ್ರತೆ ಒದಗಿಸುವಂತೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಲ್ಲಿ ಕೇಜ್ರಿವಾಲ್ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಮಾರು ಅರ್ಧಗಂಟೆಗೂ ಹೆಚ್ಚುಕಾಲ ಉಭಯ ನಾಯಕರು ಚರ್ಚೆ ನಡೆಸಿದ್ದು, ಸಭೆಯಲ್ಲಿ ಕೇಜ್ರಿವಾಲ್ ಹಲವು ಬೇಡಿಕೆ ಇಟ್ಟಿದ್ದಾರೆ. ಕೇಜ್ರಿವಾಲ್ ಅವರ ಬೇಡಿಕೆಗಳಿಗೆ ರಾಜನಾಥ್ ಸಿಂಗ್ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್ ಅವರು, ಆಮ್ ಆದ್ಮಿ ಪಕ್ಷ ಕೇಂದ್ರ ಸರ್ಕಾರದೊಂದಿಗೆ ರಚನಾತ್ಮಕ ಮತ್ತು ಉತ್ತಮ, ಆರೋಗ್ಯಕರ ಬಾಂಧವ್ಯ ಬಯಸಿದೆ ಎಂದು ಹೇಳಿದರು.
ಕೇಜ್ರಿವಾಲ್ ಭದ್ರತೆ ಹೆಚ್ಚಳ
ಈ ನಡುವೆ ದೆಹಲಿ ಭಾವಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಭದ್ರತೆಯನ್ನು ದೆಹಲಿ ಪೊಲೀಸರು ಹೆಚ್ಚಳ ಮಾಡಿದ್ದು, ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲು ನಿರ್ಧರಿಸಿದ್ದಾರೆ. ಇದಲ್ಲದೆ ಕೇಜ್ರಿವಾಲ್ ಅವರ ಕೌಶಂಬಿಯಲ್ಲಿರುವ ಅವರ ನಿವಾಸಕ್ಕೆ ನೀಡಲಾಗಿರುವ ಭದ್ರತೆಯನ್ನು ಕೂಡ ಹೆಚ್ಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


