ರಾಜ್ಯಪಾಲರು ದೆಹಲಿ ಆದೇಶ ಪಾಲಿಸುತ್ತಿದ್ದಾರೆ: ನಿತೀಶ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು, ಬಿಹಾರ ರಾಜ್ಯಪಾಲರು ದೆಹಲಿಯಿಂದ ಬರುವ ನಿರ್ದೇಶನ ಪಾಲಿಸುತ್ತಿದ್ದಾರೆ ಎಂದು ಗುರುವಾರ ಆರೋಪಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ ಅವರಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಅವಕಾಶ ನೀಡುವ ಮೂಲಕ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ ಎಂದು ನಿತೀಶ್ ಕುಮಾರ್ ದೂರಿದ್ದಾರೆ. ಅಲ್ಲದೆ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯಪಾಲರು ಮಾಂಝಿಗೆ ತಕ್ಷಣ ಬಹುಮತ ಸಾಬೀತುಪಡಿಸುವಂತೆ ಸೂಚಿಸಬೇಕು ಎಂದು ನಾವು ಒತ್ತಾಯಿಸಿದ್ದೇವು. ಆದರೆ ರಾಜ್ಯಾಪಾಲರು ಮೊದಲು ಈ ಕುರಿತು ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡಿದರು. ಬಳಿಕ ಫೆಬ್ರವರಿ 20ರಂದು ಬಹುಮತ ಸಾಬೀತಿಗೆ ಸೂಚಿಸುವ ಮೂಲಕ ಸಾಕಷ್ಟು ಸಮಯವಕಾಶ ನೀಡಲಾಗಿದೆ. ಇದರಿಂದ ಶಾಸಕರ ಕುದುರೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿದಂತಾಗಿದೆ ಎಂದು ದೂರಿದ್ದಾರೆ.
ಬಿಜೆಪಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಆರೋಪಿಸಿರುವ ನಿತೀಶ್ ಕುಮಾರ್, ಬಿಜೆಪಿ ಅಗತ್ಯ ಬಿದ್ದರೆ ತನ್ನ 35 ಶಾಸಕರ ಬೆಂಬಲ ನೀಡುವುದಾಗಿ ಸಹ ಮಾಂಝಿಗೆ ಮಾತು ಕೊಟ್ಟಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


