ಪದಗ್ರಹಣಕ್ಕೆ ಕೇಜ್ರಿವಾಲ್ ಎಚ್ಚರಿಕೆ ನಡೆ
ದೆಹಲಿ ಗದ್ದುಗೆ ಏರುವ ಮುನ್ನ ಆಮ್ ಆದ್ಮಿ ಪಾರ್ಟಿ ನಾಯಕ ಅರವಿಂದ ಕೇಜ್ರಿವಾಲ್ ಎಚ್ಚರಿಕೆಯ ನಡೆಗಳನ್ನಿರಿಸಲಾರಂಭಿಸಿದ್ದಾರೆ...

ನವದೆಹಲಿ: ದೆಹಲಿ ಗದ್ದುಗೆ ಏರುವ ಮುನ್ನ ಆಮ್ ಆದ್ಮಿ ಪಾರ್ಟಿ ನಾಯಕ ಅರವಿಂದ ಕೇಜ್ರಿವಾಲ್ ಎಚ್ಚರಿಕೆಯ ನಡೆಗಳನ್ನಿರಿಸಲಾರಂಭಿಸಿದ್ದಾರೆ. ಇದಕ್ಕೆ ಪೂರಕವಾಗಿ 14ರಂದು ನಡೆಯಲಿರುವ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ, ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಸೇರಿದಂತೆ ಕೇಂದ್ರದ ಪ್ರಮುಖ ಸಚಿವರನ್ನು ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಬುಧವಾರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ಇಂಥ ಕ್ರಮ ಅನುಸರಿಸಿದ್ದಾರೆ. ಈ ವೇಳೆ ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದರು. 2013ರಲ್ಲಿ ಬಿಜೆಪಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿಯೂ ಅದೇ ಅಂಶ ಪ್ರಸ್ತಾಪಿಸಲಾಗಿತ್ತು
ಎನ್ನುವುದನ್ನು ನೆನಪಿಸಿದ್ದಾರೆ. ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಜತೆಗಿನ ಭೇಟಿ ವೇಳೆ, ದೆಹಲಿಯಲ್ಲಿನ ಅನಧಿಕೃತ ಕಾಲನಿಗಳನ್ನು ಸಕ್ರಮಗೊಳಿಸುವ ಬಗ್ಗೆ ದೆಹಲಿ ನಗರಾಭಿವೃದ್ಧಿ ಪ್ರಾಧಿಕಾರ, ದೆಹಲಿ ಮುನಿಸಿಪಲ್ ಕಾರ್ಪೋರೇಷನ್ ಗೆ ಹೆಚ್ಚಿನ ನೆರವು ನೀಡುವ ಬಗ್ಗೆಯೂ ಚರ್ಚಿಸಿದ್ದಾರೆ.
ಇಂದು ಪ್ರಧಾನಿ ಭೇಟಿ: ಪ್ರಧಾನಿ ಮೋದಿ ಯವರನ್ನು ಕೇಜ್ರಿವಾಲ್ ಗುರುವಾರ ಭೇಟಿಯಾಗಿ ವಿಧ್ಯುಕ್ತವಾಗಿ ಆಹ್ವಾನ ನೀಡಲಿದ್ದಾರೆ.
ಕಾಂಗ್ರೆಸ್ಗೆ ಇಲ್ಲ: ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಉಪಾಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರ ನಾಯಕರಿಗೆ ಆಮಂತ್ರಣ ನೀಡದೇ ಇರಲು ನಿರ್ಧರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


