ದೇಶ

ತಮ್ಮ ಹೆಸರಲ್ಲಿ ದೇವಾಲಯ ನಿರ್ಮಾಣಕ್ಕೆ ಮೋದಿ ಅಸಮಾಧಾನ

ತಮ್ಮಹೆಸರಿನಲ್ಲಿ ದೇವಾಲಯ ನಿರ್ಮಿಸಿರುವುದಕ್ಕೆ ವಿಷಾಧ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ನನ್ನ ಹೆಸರಿನಲ್ಲಿ ದೇವಾಲಯ...

ತಮ್ಮ ಹೆಸರಲ್ಲಿ ದೇವಾಲಯ ನಿರ್ಮಾಣಕ್ಕೆ ಮೋದಿ ಅಸಮಾಧಾನ
ನರೇಂದ್ರ ಮೋದಿ
Published On :

ನವದೆಹಲಿ: ತಮ್ಮಹೆಸರಿನಲ್ಲಿ ದೇವಾಲಯ ನಿರ್ಮಿಸಿರುವುದಕ್ಕೆ ವಿಷಾಧ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ನನ್ನ ಹೆಸರಿನಲ್ಲಿ ದೇವಾಲಯ ನಿರ್ಮಾಣ ಮಾಡಿರುವುದು ಅಂಜಿಕೆಯನ್ನುಂಟು ಮಾಡಿದೆ ಎಂದು ಹೇಳಿದ್ದಾರೆ.

 ಗುಜರಾತಿನ ರಾಜ್‌ಕೋಟ್ ಸಮೀಪದ ಕೊತಾರಿಯಾ ಗ್ರಾಮದಲ್ಲಿ ಮೋದಿ ಬೆಂಬಲಿಗರು ವಂತಿಗೆ ಸಂಗ್ರಹಿಸಿ ದೇವಾಲಯ ನಿರ್ಮಾಣ ಮಾಡಿದ್ದರು. ಇದರಿಂದ ಆಶ್ಚರ್ಯಗೊಂಡಿರುವ ಮೋದಿ ಅವರು, ಇಂತಹ ಬೆಳವಣಿಗೆಗಳು ಭಾರತೀಯ ಸಂಸ್ಕೃತಿಗೆ ಧಕ್ಕೆ ತರುವಂತದ್ದು ಎಂದು ಟ್ವಿಟ್ ಮಾಡಿದ್ದಾರೆ.  

ನಾಗರಿಕರು ಇಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬಾರದು. ಇನ್ನು ಮುಂದೆ ಇಂತಹ ಕೃತ್ಯಗಳಿಗೆ ಮುಂದಾಗಬಾರದು. ನಿಮಗೆ ನನ್ನ ಮೇಲೆ ಅಭಿಮಾನವಿದ್ದರೆ ದೇವಾಲಯ ನಿರ್ಮಾಣ ಮಾಡುವ ಬದಲು ನನ್ನ ಕನಸಿನ ಕೂಸಾದ ಸ್ವಚ್ಛ ಭಾರತ ಆಂದೋಲನಕ್ಕೆ ಕೈ ಜೋಡಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.