ದೇಶ

ಅಜ್ಜಿಯನ್ನೇ ಕೊಂದ ಮೊಮ್ಮಗ, ಸ್ನೇಹಿತ ಸೆರೆ

ಅಜ್ಜಿಯನ್ನೇ ಕೊಂದ ಮೊಮ್ಮಗ, ಸ್ನೇಹಿತ ಸೆರೆ
Published On :

ಬೆಂಗಳೂರು: ಮದ್ಯಪಾನ ಮಾಡಲು ಹಣ ನೀಡಿಲ್ಲ ಎನ್ನುವ ಕಾರಣಕ್ಕೆ ಸ್ವಂತ ಅಜ್ಜಿಯನ್ನೇ ಕೊಂದ ಮೊಮ್ಮಗ ಹಾಗೂ ಆತನ ಸ್ನೇಹಿತನನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಫೆ.3ರ ರಾತ್ರಿ 1 ಗಂಟೆ ಸುಮಾರಿಗೆ ಯಲಹಂಕ ಚೌಡೇಶ್ವರಿ ಬಡಾವಣೆ 1 ನೇ ಮುಖ್ಯ ರಸ್ತೆಯಲ್ಲಿ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ಈಶ್ವರಮ್ಮ(75) ಎಂಬುವರನ್ನು ಕೊಲೆ ಮಾಡಿದ್ದ ಆಂದ್ರಪ್ರದೇಶ ಚಿತ್ತೂರು ಜಿಲ್ಲೆಯ ಧನಂಜಯ (38) ಹಾಗೂ ಈತನ ಸ್ನೇಹಿತ ವೆಂಕಟೇಶ್ವರ್ (34) ಬಂಧಿತರು. ಮತ್ತೊಬ್ಬ ಆರೋಪಿ ಪೆದ್ದಾರೆಡ್ಡಿ ಎಂಬಾತ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಶ್ವರಮ್ಮ ಅವರ ಪತಿ ಲಕ್ಷ್ಮೀನಾರಾಯಣ 5 ವರ್ಷಗಳ ಹಿಂದೆ ನಿಧನರಾಗಿದ್ದರು. ಅದೇ ಪ್ರದೇಶದಲ್ಲೇ ಮೂವರು ಮಕ್ಕಳು ವಾಸವಿದ್ದರು. ಈಶ್ವರಮ್ಮ ಅವರ ಮೊಮ್ಮಗ ಧನಂಜಯ ಬೆಂಗಳೂರಿನಲ್ಲೇ ಹುಟ್ಟಿ ಬೆಳೆದಿದ್ದ. ಆದರೆ, ಮದುವೆಯಾದ ಬಳಿಕ ಆಂಧ್ರಪ್ರದೇಶಕ್ಕೆ ತೆರಳಿದ್ದ. ಆರೋಪಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಸ್ನೇಹಿತರೊಂದಿಗೆ ಸೇರಿ ಮದ್ಯಪಾನ ಮಾಡುತ್ತಿದ್ದ. ಬೆಂಗಳೂರಿಗೆ ಬಂದಾಗ ಅಜ್ಜಿ ಈಶ್ವರಮ್ಮ ಬಳಿ ರು. 50 ಅಥವಾ 100 ಪಡೆದು ಮದ್ಯಪಾನ ಮಾಡುತ್ತಿದ್ದ. ಆದರೆ, ಇತ್ತೀಚೆಗೆ ಅಜ್ಜಿ ಹಣ ನೀಡುವುದನ್ನು ನಿಲ್ಲಿಸಿದ್ದಳು. ಇದರಿಂದ ಕುಪಿತಗೊಂಡಿದ್ದ ಧನಂಜಯ ಸ್ನೇಹಿತನೊಡನೆ ಸೇರಿ ಕೊಲೆ ಮಾಡಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.