ದೆಹಲಿ ಕಾನ್ವೆಂಟ್ ಮೇಲೆ ದುಷ್ಕರ್ಮಿಗಳ ದಾಳಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕ್ರೈಸ್ತ ಸಮುದಾಯದ ಧಾರ್ಮಿಕ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳ ಮೇಲಿನ...

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕ್ರೈಸ್ತ ಸಮುದಾಯದ ಧಾರ್ಮಿಕ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳ ಮೇಲಿನ ದಾಳಿ ಮುಂದುವರಿದಿದೆ.
ಗುರುವಾರ ರಾತ್ರಿ ದೆಹಲಿಯ ಹೋಲಿ ಚೈಲ್ಡ್ ಆಕ್ಸಿಲಿಯಂ ಶಾಲೆಯ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಶಾಲೆಯ ಸಿಸಿ ಟಿವಿ ಕ್ಯಾಮೆರಾವನ್ನು ಧ್ವಂಸ ಮಾಡಿ, ಪ್ರಾಂಶುಪಾಲರ ಕಚೇರಿಯಿಂದ ರು. 12 ಸಾವಿರ ನಗದನ್ನು ಕದ್ದಿದ್ದಾರೆ. ಪೊಲೀಸರು ಇದನ್ನು ಕಳ್ಳರ ಕೆಲಸವಿರಬಹುದು ಎಂದು ಹೇಳಿದ್ದರೆ, ರಾಜಕೀಯ ವ್ಯಕ್ತಿಗಳು ಹಾಗೂ ಕ್ರಿಶ್ಚಿಯನ್ ಸಮುದಾಯದ ನಾಯಕರು ಇದನ್ನು ಅಲ್ಲಗಳೆದಿದ್ದಾರೆ.
ತ್ವರಿತ ತನಿಖೆಗೆ ಪ್ರಧಾನಿ ಸೂಚನೆ ಘಟನೆ ದೇಶಾದ್ಯಂತ ತೀವ್ರ ಚರ್ಚೆಗೆ ಗುರಿಯಾಗುತ್ತಿದ್ದಂತೆ ದೆಹಲಿ ಪೊಲೀಸ್ ಮುಖ್ಯಸ್ಥ ಬಿ.ಎಸ್. ಬಸ್ಸಿ ಅವರಿಗೆ ಸಮನ್ಸ್ ಕಳುಹಿಸಿರುವ ಪ್ರಧಾನಿ ಮೋದಿ, ಇಂತಹ ದಾಂದಲೆ ಪ್ರಕರಣಗಳ ಬಗ್ಗೆ ತ್ವರಿತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರನ್ನು ಆದಷ್ಟು ಬೇಗ ಬಂಧಿಸುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


