ಭಾರತಕ್ಕೆ ಕಾಯಂ ಸ್ಥಾನ ಪಾಕ್ ವಿರೋಧ
ಒಂದೆಡೆ ದ್ವಿಪಕ್ಷೀಯ ಮಾತುಕತೆಗೆ ಭಾರತ ಸರ್ಕಾರ ಮುಂದಾಗಿದ್ದರೆ, ಪಾಕ್ ಮಾತ್ರ ತನ್ನ ಕುತಂತ್ರ ಬುದ್ಧಿ...

ನವದೆಹಲಿ: ಒಂದೆಡೆ ದ್ವಿಪಕ್ಷೀಯ ಮಾತುಕತೆಗೆ ಭಾರತ ಸರ್ಕಾರ ಮುಂದಾಗಿದ್ದರೆ, ಪಾಕ್ ಮಾತ್ರ ತನ್ನ ಕುತಂತ್ರ ಬುದ್ಧಿ ಮುಂದುವರಿಸಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ಒದಗಿಸಲು ಬೆಂಬಲಿಸುವುದಾಗಿ ಚೀನಾ ಘೋಷಿಸಿರುವುದು ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ.
ಚೀನಾದೊಂದಿಗೆ ಪಾಕ್ ಉತ್ತಮ ಸಂಬಂಧ ಹೊಂದಿದ್ದು, ಈಗ ಚೀನಾವು ಭಾರತಕ್ಕೆ ಬೆಂಬಲ ನೀಡುತ್ತಿರುವುದನ್ನು ಅದಕ್ಕೆ ಸಹಿಸಲಾಗುತ್ತಿಲ್ಲ. ಚೀನಾ ಘೋಷಣೆ ಬೆನ್ನಲ್ಲೇ ಪಾಕಿಸ್ತಾನ ಈ ಪ್ರಸ್ತಾಪವನ್ನು ವಿರೋಧಿಸಿದೆ. ಭಾರತವು ಕಾಶ್ಮೀರಕ್ಕೆ ಸಂಬಂಧಿಸಿ ವಿಶ್ವಸಂಸ್ಥೆಯ ನಿರ್ಣಯವನ್ನು ಪಾಲಿಸಿಲ್ಲ. ಹಾಗಾಗಿ ಭಾರತಕ್ಕೆ ಕಾಯಂ ಸ್ಥಾನ ನೀಡುವುದನ್ನು ನಾವು ಸ್ವಾಗತಿಸುವುದಿಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.
ಗುರುವಾರ ರಾತ್ರಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರೊಂದಿಗಿನ ದೂರವಾಣಿ ಮಾತುಕತೆ ವೇಳೆ ಷರೀಫ್ ಈ ವಿಚಾರ ತಿಳಿಸಿದ್ದಾರೆ. ಭಾರತಕ್ಕೆ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಪಡೆಯುವ ಅರ್ಹತೆಯಿಲ್ಲ ಎಂದೂ ಅವರು ತಗಾದೆ ತೆಗೆದಿದ್ದಾರೆ. ಇದೇ ವೇಳೆ, ಪಾಕಿಸ್ತಾನವು ಪರಮಾಣು ಪೂರೈಕಾ ಸಮೂಹದ ಸದಸ್ಯನಾಗಲು ಬಯಸುತ್ತದೆ ಎಂದೂ ಷರೀಫ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


