ದೇಶ

ಬಿಜೆಪಿ ಬೆಂಬಲ ತಳ್ಳಿಹಾಕಿದ ಬಿಹಾರ ಸಿಎಂ ಮಾಂಝಿ

ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು, ತಾವು ಬಿಜೆಪಿ ಬೆಂಬಲ ಪಡೆಯು ಉದ್ದೇಶದಿಂದ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ವರದಿಗಳನ್ನು ಸೋಮವಾರ ತಳ್ಳಿಹಾಕಿದ್ದಾರೆ.

ಬಿಜೆಪಿ ಬೆಂಬಲ ತಳ್ಳಿಹಾಕಿದ ಬಿಹಾರ ಸಿಎಂ ಮಾಂಝಿ
ಜಿತನ್ ರಾಮ್ ಮಾಂಝಿ
Published On :

ನವದೆಹಲಿ: ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು, ತಾವು ಬಿಜೆಪಿ ಬೆಂಬಲ ಪಡೆಯು ಉದ್ದೇಶದಿಂದ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ ಎಂಬ ವರದಿಗಳನ್ನು ಸೋಮವಾರ ತಳ್ಳಿಹಾಕಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಂಝಿ, ನನಗೆ ಬಿಹಾರ ವಿಧಾನಸಭೆಯನ್ನು ವಿಸರ್ಜಿಸುವ ಅಥವಾ ರಾಷ್ಟ್ರಪತಿ ಆಡಳಿತಕ್ಕೆ ಸಿಫಾರಸು ಮಾಡುವ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಇಂದು ಸಂಜೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡುವ ಸಾಧ್ಯತೆಯನ್ನೂ ಮಾಂಝಿ ತಳ್ಳಿಹಾಕಿದ್ದಾರೆ.

ನಾನು ಕೇಂದ್ರ ಸರ್ಕಾರದ ಸಚಿವರನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದ್ದೇನೆ ಹೊರತು, ಯಾವುದೇ ಬಿಜೆಪಿ ನಾಯಕರನ್ನು ಅಲ್ಲ. ನನಗೆ ಬೆಂಬಲ ನೀಡುವುದು, ಬಿಡುವುದು ಅವರಿಗೆ ಬಿಟ್ಟಿದ್ದು ಎಂದಿದ್ದಾರೆ ಮಾಂಝಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರಾಕರಿಸಿದ ನಂತರ ಜೆಡಿಯುನಿಂದ ಉಚ್ಚಾಟನೆಗೊಂಡಿರುವ ಮಾಂಝಿ ಬಿಜೆಪಿಯ ಕದ ತಟ್ಟುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಫೆಬ್ರವರಿ 20ರಂದು ವಿಶ್ವಾಸಮತಯಾಚನೆ ವೇಳೆ ಮಾಂಝಿಗೆ ಬೆಂಬಲ ನೀಡಲು ಬಿಜೆಪಿ ಸಿದ್ಧತೆ ನಡೆಸಿದೆ ಎನ್ನಲಾಗುತ್ತಿದೆ.

ಈ ಮಧ್ಯೆ ಬಿಹಾರ ಮುಖ್ಯಮಂತ್ರಿಗೆ ಬೆಂಬಲ ನೀಡಲು ಮುಂದಾಗಿರುವ ಬಿಜೆಪಿಗೆ ಮಿತ್ರ ಪಕ್ಷ ಶಿವಸೇನೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ಪಾಪದ ಕೃತ್ಯ ಎಂದಿದೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಮಾಂಝಿಯನ್ನು ಬಿಜೆಪಿ ಎತ್ತಿಕಟ್ಟುತ್ತಿದೆ ಎಂದು ಆರೋಪಿಸಿದೆ.

ಜಿತನ್ ರಾಂ ಮಾಂಝಿ ಸಿಎಂ ಆದ ದಿನದಂದಲೂ ಅನನುಭವಿ ರಾಜಕಾರಣಿಯಂತೆ ವರ್ತಿಸುತ್ತಿದ್ದಾರೆ ಎಂದು ಶಿವಸೇನಾದ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.