ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದ ಶ್ರೀಲಂಕಾ ಅಧ್ಯಕ್ಷ
ಶ್ರೀಲಂಕಾ ಅಧ್ಯಕ್ಷರಾಗಿ ಮೊದಲ ಬಾರಿಗೆ ಪ್ರವಾಸ ಕೈಗೊಂಡಿರುವ ಮೈತ್ರಿಪಾಲ ಸಿರಿಸೇನಾ ಅವರು...

ನವದೆಹಲಿ: ಶ್ರೀಲಂಕಾ ಅಧ್ಯಕ್ಷರಾಗಿ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿರುವ ಮೈತ್ರಿಪಾಲ ಸಿರಿಸೇನಾ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ಗುಚ್ಚ ಇರಿಸುವ ಮೂಲಕ ಸೋಮವಾರ ಗೌರವ ಪೂರಕ ನಮನವನ್ನು ಸಲ್ಲಿಸಿದ್ದಾರೆ.
ಗಾಂಧೀಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ನಂತರ ಸಿರಿಸೇನಾ ನೇರವಾಗಿ ರಾಷ್ಟ್ರಪತಿ ಭವನ ತಲುಪಲಿದ್ದು, ಅಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಹಣಕಾಸು, ಶಾಂತಿ ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಇಂದು ಸಂಜೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಸಿರಿಸೇನಾ ಅವರು ಭೇಟಿ ಮಾಡಲಿದ್ದು, ಫೆಬ್ರವರಿ 17 ರಂದು ಬುಧ್‌ಗಯಾ ಮತ್ತು ತಿರುಪತಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 18ರಂದು ವಾಪಸ್ಸು ಶ್ರೀಲಂಕಾಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


