ದೇಶ

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಅರುಣ್ ಜೇಟ್ಲಿ ಮನವಿ

ಬ್ಯಾಂಕ್ ಉದ್ಯೋಗಿಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ...

ಬ್ಯಾಂಕ್ ಮುಷ್ಕರ ಕೈಬಿಡುವಂತೆ ಅರುಣ್ ಜೇಟ್ಲಿ ಮನವಿ
ಅರುಣ್ ಜೇಟ್ಲಿ
Published On :

ನವದೆಹಲಿ: ಬ್ಯಾಂಕ್ ನೌಕರುಗಳ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಕೈಗೊಂಡಿರುವ ನಿರ್ಧಾರವನ್ನು ಕೈಬಿಡುವಂತೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್ ನೌಕರುಗಳ ಒಕ್ಕೂಟಗಳು ಫೆ.25ರಿಂದ 29ರ ತನಕ ನಾಲ್ಕು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧರಿಸಿವೆ. ಈ ಹಿನ್ನಲೆಯಲ್ಲಿ ಮುಷ್ಕರವನ್ನು ಕೈಬಿಡುವಂತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮನವಿ ಮಾಡಿದ್ದಾರೆ.

ದೇಶದ ಜನತೆಯ ದೈನಂದಿನ ಬ್ಯಾಂಕಿಂಗ್ ವ್ಯವಹಾರದ ಹಿತದೃಷ್ಟಿಯಿಂದ ಮುಷ್ಕರ ಸೂಕ್ತವಾದುದಲ್ಲ. ಈಗಾಗಲೇ ವೇತನ ಪರಿಷ್ಕರಣೆ ಸಂಬಂಧ ನೌಕರರ ಒಕ್ಕೂಟಗಳು, ಸಂಘಟನೆಗಳ ಜತೆಗೆ ಬ್ಯಾಂಕ್‌ಗಳು ಮಾತುಕತೆ ನಡೆಸುತ್ತಿವೆ. ಬಿಕ್ಕಟ್ಟನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವುದೇ ಉತ್ತಮ ಎಂದು ಜೇಟ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.