ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾ ಬಂಧನ
ಹಣಕಾಸು ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಶನಿವಾರ ರಾತ್ರಿ ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ...

ನವದೆಹಲಿ: ಹಣಕಾಸು ಅವ್ಯವಹಾರ ಆರೋಪದಡಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಪ್ತ ಶಿಬಾಜಿ ಪಾಂಜಾನನ್ನು ಶನಿವಾರ ರಾತ್ರಿ ಕೊಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಮಮತಾ ನಿಯೋಗದಲ್ಲಿದ್ದ ಶಿಬಾಜಿ ಪಾಂಜಾ ಮಮತಾ ಜೊತೆ ಬಾಂಗ್ಲಾದೇಶಕ್ಕೆ ತೆರಳಿದ್ದರು. ನಿನ್ನೆ ರಾತ್ರಿ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ವಲಸೆ ಇಲಾಖೆಯ ಅಧಿಕಾರಿಗಳು ಪಾಂಜಾ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಪೊಲೀಸರ ಸೂಚನೆ ಮೇರೆಗೆ ಪಾಂಜಾ ಅವರನ್ನು ಬಂಧಿಸಲಾಗಿದೆ. ಖಾಸಗಿ ಟಿವಿ ಚಾನೆಲ್‌ನ ನಿರ್ಮಾಪಕ ಮತ್ತು ಕೈಗಾರಿಕೋದ್ಯಮಿಯಾಗಿರುವ ಪಾಂಜಾ ಅವರನ್ನು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


