ಸರ್ಕಾರ ಬದಲಾಗಿದೆಯೇ ವಿನಃ ವ್ಯವಸ್ಥೆ ಬದಲಾಗಿಲ್ಲ: ಶಿವಸೇನೆ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೇತೃತ್ವದ ಸರ್ಕಾರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ, ಮಹಾರಾಷ್ಟ್ರದಲ್ಲಿ ಸರ್ಕಾರದಲ್ಲಿ ಬದಲಾಗಿದೆಯೇ ವಿನಃ ವ್ಯವಸ್ಥೆ ಬದಲಾಗಿಲ್ಲ ಎಂದು ಶಿವಸೇನೆ ಸೋಮವಾರ ಹೇಳಿದೆ...

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೇತೃತ್ವದ ಸರ್ಕಾರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ, ಮಹಾರಾಷ್ಟ್ರದಲ್ಲಿ ಸರ್ಕಾರದಲ್ಲಿ ಬದಲಾಗಿದೆಯೇ ವಿನಃ ವ್ಯವಸ್ಥೆ ಬದಲಾಗಿಲ್ಲ ಎಂದು ಶಿವಸೇನೆ ಸೋಮವಾರ ಹೇಳಿದೆ.
ಈ ಕುರಿತಂತೆ ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಪ್ರತಿಕ್ರಿಯಿಸಿರುವ ಶಿವಸೇನೆ, ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರದಿಂದ ರಚನೆಯಾದಾಗಿನಿಂದಲೂ ಯಾವುದೇ ಉತ್ತಮ ಬೆಳವಣಿಗೆಗಳು ಕಂಡುಬಂದಿಲ್ಲ. ಹೊಸ ಸರ್ಕಾರ ಏನನ್ನು ಬದಲಾಯಿಸಿದೆ? ಎಂದು ಪ್ರಶ್ನಿಸಿರುವ ಶಿವಸೇನೆ ಯಾರಿಗಾದರೂ ಈ ಬಗ್ಗೆ ತಿಳಿದಿದ್ದರೆ ದಯವಿಟ್ಟು ನಮಗೂ ತಿಳಿಸಿ ಎಂದು ಹೇಳಿದೆ.
ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರ ಹತ್ಯೆ ನಂತರ ಗೋವಿಂದ್ ಪನ್ಸಾರೆ ಅವರ ಹತ್ಯೆಯಾಗಿದೆ. ಕೊಲೆಗಾರರನ್ನು ಹಿಡಿಯಲು ಪೊಲೀಸರು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಈ ಹಿಂದೆ ಫಡ್ನವೀಸ್ ಹೇಳಿದ್ದರು. ಪೊಲೀಸರು ದುಷ್ಕರ್ಮಿಗಳನ್ನು ಹುಡುಕುತ್ತಿದ್ದೇವೆ ಎಂದು ಜನರಲ್ಲಿ ಅಪನಂಬಿಕೆಗಳನ್ನು ಹುಟ್ಟುಹಾಕುತ್ತಲೇ ಇದ್ದಾರೆ. ಆದರೆ, ಈ ವರೆಗೂ ಪ್ರಕರಣಗಳ ದುಷ್ಕರ್ಮಿಗಳನ್ನು ಸೆರೆಹಿಡೆಯಲು ಪೊಲೀಸರು ವಿಫಲವಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಹಾಗೂ ಸರ್ಕಾರ ಬದಲಾಗಿದೆಯೇ ವಿನಃ ವ್ಯವಸ್ಥೆಗಳು ಬದಲಾಗಿಲ್ಲ ಎಂದು ತನ್ನ ಮುಖವಾಣಿಯಲ್ಲಿ ಶಿವಸೇನೆ ಬರೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


