ಭೂ ಸ್ವಾಧೀನ ಸುಗ್ರೀವಾಜ್ಞೆ ವಿರೋಧಿಸಿ ಟಿಎಂಸಿ ಸಂಸದರ ಪ್ರತಿಭಟನೆ
ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹೊರಡಿಸಿರುವ ಎನ್‌ಡಿಎ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ ಹಿನ್ನೆಲೆಯಲ್ಲಿ ಇಂದು ಧರಣಿಗಿಳಿದಿರುವ ಟಿಎಂಸಿ ಪಕ್ಷದ...

ನವದೆಹಲಿ: ಭೂ ಸ್ವಾಧೀನ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಹೊರಡಿಸಿರುವ ಎನ್‌ಡಿಎ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ ಹಿನ್ನೆಲೆಯಲ್ಲಿ ಇಂದು ಧರಣಿಗಿಳಿದಿರುವ ಟಿಎಂಸಿ ಪಕ್ಷದ ಸಂಸದರು ಸಂಸತ್ ಭವನದ ಹೊರಾಂಗಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಭೂ ಸ್ವಾಧೀನ ಮಸೂದೆಯನ್ನು ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಿದೆ. ಈ ಹಿನ್ನೆಲೆಯಲ್ಲಿ ಇಂದು ಧರಣಿಗಿಳಿದಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದರ ಸದನದಲ್ಲಿ ಕಾಯ್ದೆ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಸಂಸತ್‌ನ ಹೊರಾಂಗಣದಲ್ಲಿ ಪ್ರತಿಭಟನೆಗಿಳಿದಿದೆ.
ಮೋದಿ ಸರ್ಕಾರ ಕಳೆದ ಡಿ.29ರಂದು ಸುಗ್ರೀವಾಜ್ಞೆ ಜಾರಿಗೊಳಿಸುವ ಮೂಲಕ ಯುಪಿಎ ಸರ್ಕಾರದ 2013ರ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಈ ಕಾಯ್ದೆಯ ಪ್ರಕಾರ, ಕೈಗಾರಿಕಾ ಕಾರಿಡಾರ್, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದ ಉದ್ಯಮಗಳು, ಮೂಲಸೌಲಭ್ಯ ಯೋಜನೆ, ರಕ್ಷಣೆ ಹಾಗೂ ವಸತಿ ಯೋಜನೆಗಳಿಗೆ ಅಗತ್ಯವಿರುವ ಭೂಮಿಯನ್ನು ಅದರ ಮಾಲೀಕರ ಅನುಮತಿ ಪಡೆಯದೆ ವಶಪಡಿಸಿಕೊಳ್ಳಲು ಅವಕಾಶ ನೀಡುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


