ಪ್ರದೀಪ್ ಜೈನ್ ಹತ್ಯೆ ಪ್ರಕರಣ: ಭೂಗತ ಪಾತಕಿ ಅಬು ಸಲೇಂಗೆ ಜೀವಾವಧಿ ಶಿಕ್ಷೆ
ಉದ್ಯಮಿ ಪ್ರದೀಪ್ ಜೈನ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಮುಂಬೈ ವಿಶೇಷ ಟಾಡಾ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಮುಂಬೈ: ಉದ್ಯಮಿ ಪ್ರದೀಪ್ ಜೈನ್ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಮುಂಬೈ ವಿಶೇಷ ಟಾಡಾ ಕೋರ್ಟ್ ಬುಧವಾರ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
೧೯೯೫ರಲ್ಲಿ ಮುಂಬೈನ ರಿಯಲ್ ಎಸ್ಟೇಟ್ ಉದ್ಯಮಿ ಪ್ರದೀಪ್ ಜೈನ್ ಅವರ ಕೊಲೆ ಆರೋಪದಲ್ಲಿ, ಭಾರತಕ್ಕ ಗಡಿಪಾರಾಗಿರುವ ಅಬು ಸಲೇಂ ಮತ್ತು ಇನ್ನಿತರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರು ಎಂದುಕಳೆದ ಸೋಮವಾರ ತೀರ್ಪು ನೀಡಿದ್ದ ಟಾಡಾ ಕೋರ್ಟ್, ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.
ಪ್ರದೀಪ್ ಜೈನ್ ತಮ್ಮ ಬೃಹತ್ ಬಂಗಲೆಯನ್ನು ತೊರೆಯಲು ನಿರಾಕರಿಸಿದ್ದಕ್ಕೆ ೧೯೯೫ ಮಾರ್ಚ್ ೭ ರಂದು ಅವರ ಜುಹೂ ಬಂಗಲೆ ಹೊರಗೆ ಗುಂಡಿನ ದಾಳಿಗೆ ಆಹುತಿಯಾಗಿದ್ದರು.
೧೯೯೩ರ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿ ಅಬು ಸೇಲಂನನ್ನು ೨೦೦೫, ನವೆಂಬರ್ ೧೧ರಂದು ಪೋರ್ಚುಗಲ್ ನಿಂದ ಭಾರತಕ್ಕೆ ಗಡಿಪಾರು ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


