ದೇಶ

'ಲಿಂಗಾ' ಚಿತ್ರದ ವಿರುದ್ಧ ಹೇಳಿಕೆ ನೀಡದಂತೆ ನಿರ್ಬಂಧ

'ಲಿಂಗಾ' ಚಿತ್ರ ಹಾಗೂ ರಜನಿಕಾಂತ್ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ತಮಿಳುನಾಡಿನ...

'ಲಿಂಗಾ' ಚಿತ್ರದ ವಿರುದ್ಧ ಹೇಳಿಕೆ ನೀಡದಂತೆ ನಿರ್ಬಂಧ
ರಜನಿಕಾಂತ್
Published On :

ಬೆಂಗಳೂರು: 'ಲಿಂಗಾ' ಚಿತ್ರ ಹಾಗೂ ರಜನಿಕಾಂತ್ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆ ನೀಡದಂತೆ ತಮಿಳುನಾಡಿನ 9 ವಿತರಕರಿಗೆ ಕೋರ್ಟ್ ನಿರ್ಬಂಧ ಹೇರಿದೆ.

ಬೆಂಗಳೂರಿನ 15ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ಈ ಆದೇಶ ಹೊರಡಿಸಿದೆ. ಲಿಂಗಾ ಚಿತ್ರ, ರಜನಿಕಾಂತ್ ಮತ್ತು ನಿರ್ಮಾಪಕರ ವಿರುದ್ಧ ವಿತರಕರು ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದರು.

ಈ ಸಂಬಂಧ ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್ ಧಾವೆ ಹೂಡಿತ್ತು. ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ತಮಿಳುನಾಡಿನ 9 ವಿತರಕರಿಗೆ ನಿರ್ಬಂಧ ರಜನಿಕಾಂತ್ ವಿರುದ್ಧ ಹಾಗೂ ಚಿತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಅವಹೇಳನಕಾರಿ ಹೇಳಿಕೆ ನೀಡಬಾರುದು ಎಂದು ನಿರ್ಬಂಧ ಹಾಕಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಲಿಂಗ ಚಿತ್ರ ಬಿಡುಗಡೆಯಾಗಿ ಅನೇಕ ದಿನ ಕಳೆದರೂ ಚಿತ್ರದ ವಿತರಕರು ನೀಡಿದ್ದ ಹಣದ ಶೇ.30ರಷ್ಟು ಕೂಡ ವಾಪಸ್‌ಗಳಿಸಲು ಸಾಧ್ಯವಾಗಿಲ್ಲ ಎಂದು ವಿತರಕರು ರಜನಿಕಾಂತ್ ಮತ್ತು ನಿರ್ಮಾಪಕರ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದರು. ಈ ಸಂಬಂಧ ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್ ಧಾವೆ ಹೂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.