ದೇಶ

ಷಟ್ಪಥ ರಸ್ತೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ನೆರವು ಕೋರಿ ಮನವಿ

ಬೆಂಗಳೂರಿನಲ್ಲಿ ರು.18,400 ಕೋಟಿ ವೆಚ್ಚದ ಷಟ್ಪಥ ರಸ್ತೆಯ 3 ಮೇಲ್ಸೇತುವೆಗಳನ್ನು ನಿರ್ಮಿಸಲು ನೆರವು...

ಷಟ್ಪಥ ರಸ್ತೆ ಮೇಲ್ಸೇತುವೆಗಳ ನಿರ್ಮಾಣಕ್ಕೆ ನೆರವು ಕೋರಿ ಮನವಿ
ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ರಾಜ್ಯದ ನಿಯೋಗ (ಸಂಗ್ರಹ ಚಿತ್ರ)
Published On :

ನವದೆಹಲಿ: ಬೆಂಗಳೂರಿನಲ್ಲಿ ರು.18,400 ಕೋಟಿ ವೆಚ್ಚದ ಷಟ್ಪಥ ರಸ್ತೆಯ 3 ಮೇಲ್ಸೇತುವೆಗಳನ್ನು ನಿರ್ಮಿಸಲು ನೆರವು ನೀಡುವಂತೆ ರಾಜ್ಯದ ನಿಯೋಗ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿತು.

ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್, ರಾಜ್ಯದ ವಾರ್ತಾ, ಮೂಲಸೌಕರ್ಯ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮೇಯರ್ ಎನ್.ಶಾಂತ ಕುಮಾರಿ, ಉಪಮೇಯರ್, ಹಲವು ಸ್ಥಾಯಿ ಸಮಿತಿಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳನ್ನೊಳಗೊಂಡ ನಿಯೋಗ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಬೆಂಗಳೂರಿನಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ನಗರದ ಹೃದಯ ಭಾಗವಾಗಿರುವ ಸಿಲ್ಕ್ ಬೋರ್ಡ್‍ನಿಂದ ಕಂಟೋನ್ಮೆಂಟ್, ಕೆ.ಆರ್.ಪುರದಿಂದ ಯಶವಂತಪುರ ಹಾಗೂ ವರ್ತೂರು ಕೋಡಿಯಿಂದ ಜ್ವಾನ ಭಾರತಿವರೆಗೆ ಒಟ್ಟು 75 ಕಿ.ಮೀ ಉದ್ದದ 3 ಮೇಲ್ಸೇತುವೆಗಳನ್ನು ನಿರ್ಮಿಸಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.