ಕಾರ್ಪೋರೇಟ್ ಬೇಹು: ಇಬ್ಬರು ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ
ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವರಲ್ಲಿ ಇಬ್ಬರು ಆರೋಪಿಗಳನ್ನು ಐದು ದಿನಗಳ ಕಾಲ...

ನವದೆಹಲಿ: ಕಾರ್ಪೋರೇಟ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವರಲ್ಲಿ ಇಬ್ಬರು ಆರೋಪಿಗಳನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ.
ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ ಮುಖ್ಯ ನ್ಯಾಯಾಮೂರ್ತಿ ಸತೀಶ್ ಕುಮಾರ್ ಅರೋರ, ಕೇಂದ್ರ ಪರಿಸರ ಇಲಾಖೆಯ ಜಂಟಿ ಕಾರ್ಯದರ್ಶಿಯ ಆಪ್ತ ಸಹಾಯಕ ಜಿತೇಂದ್ರ ನಾಗ್ಪಾಲ್ ಮತ್ತು ಯುಪಿಎಸ್ ಸಿ ಸದಸ್ಯರ ಆಪ್ತ ಸಹಾಯಕ ವಿಪನ್ ಕುಮಾರ್ ಅವರುನ್ನು ಹೆಚ್ಚಿನ ವಿಚಾರಣೆಗಾಗಿ 5 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ ಎಂಬ ಆದೇಶ ಹೊರಡಿಸಿದ್ದಾರೆ.
ಸಚಿವಾಲಯದ ಪ್ರಮುಖ ದಾಖಲೆಗಳನ್ನು ಮತ್ತೋರ್ವ ಆರೋಪಿ ಲೋಕೇಶ್ ಎಂಬಾತನಿಗೆ ನೀಡುತ್ತಿದ್ದ ಎಂಬ ಆರೋಪದ ಮೇಲೆ ಕ್ರೈಂ ಬ್ರ್ಯಾಂಚ್ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರು 16 ಮಂದಿಯನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


